ಬಿಟ್ ಕಾಯಿನ್ ಹಗರಣದ ಮರು ತನಿಖೆಗೆ ನಿರ್ಧಾರ

0
24

ಬೆಂಗಳೂರು: ಬಹುಕೋಟಿ ಬಿಟ್‌ ಕಾಯಿನ್ ಹಗರಣದ ಪ್ರಕರಣವನ್ನು ಮರುಪರಿಶೀಲಿಸುತ್ತಿದ್ದೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ. ಹಗರಣದಲ್ಲಿ ‘ದೊಡ್ಡ ಹೆಸರುಗಳನ್ನು ಒಳಗೊಂಡಿರುವ ಕಾರಣ’ ಅದನ್ನು ಮುಚ್ಚಿಹಾಕಲು ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ಪ್ರಯತ್ನಿಸುತ್ತಿದೆ ಎಂದು ಆಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಆರೋಪಿಸಿತ್ತು. ನಾವು ಬಿಟ್‌ ಕಾಯಿನ್ ಪ್ರಕರಣವನ್ನು ಮರು ಪರಿಶೀಲಿಸುತ್ತಿದ್ದೇವೆ. ಬಿಜೆಪಿಯವರು ಈಗಲೇ ಕುಣಿದಾಡುತ್ತಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇನ್ನೂ ತಿಂಗಳೂ ಕಳೆದಿಲ್ಲ. ಅವರು ಸ್ವಲ್ಪ ಸಮಾಧಾನವಾಗಿರುವುದು ಒಳ್ಳೆಯದು’ ಎಂದರು.

Previous articleರಾಷ್ಟ್ರೀಯ ಪಕ್ಷಗಳು ಕರ್ನಾಟಕದ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ
Next article112 ಸಹಾಯವಾಣಿಗೂ ಬಂತು ವಾಟ್ಸ್‌ಪ್‌