256 ಉಪ ನೋಂದಣಿ ಕಚೇರಿಯಲ್ಲಿ ಕಾವೇರಿ 2.0 ತಂತ್ರಾಂಶ ಜಾರಿ

0
12

ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸರಳೀಕೃತ ಮಾಡುವ ನಿಟ್ಟಿನಲ್ಲಿ ಕಾವೇರಿ 2.0 ತಂತ್ರಾಂಶ ಯಶಸ್ವಿಯಾಗಿ ಅನುಷ್ಠಾನವಾಗಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಹೇಳಿದರು. ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು 256 ಪೈಕಿ 251 ನೋಂದಣಿ ಕಚೇರಿಗಳಲ್ಲಿ ಕಾವೇರಿ-2 ಜಾರಿಯಾಗಲಿದೆ ಎಂದಿದ್ದಾರೆ. ಶನಿವಾರದವೇಳೆಗೆ ಎಲ್ಲಾ 256 ಕೇಂದ್ರಗಳಲ್ಲಿ ಕಾವೇರಿ 2.0 ಜಾರಿಯಲ್ಲಿ ಬರಲಿದೆ. ಎಲ್ಲಾ ದಾಖಲೆಗಳನ್ನು ಕಾವೇರಿ-2ನಲ್ಲೇ ಸಲ್ಲಿಕೆ ಮಾಡಬಹುದು. ಸಬ್ ರಿಜಿಸ್ಟ್ರಾರ್ ಕೂಡ ಆನ್​​ಲೈನ್​​ನಲ್ಲೇ ದಾಖಲೆ ಪರಿಶೀಲಿಸ್ತಾರೆ. ನೋಂದಣಿ ಶುಲ್ಕವನ್ನೂ ಆನ್​​ಲೈನ್​​ನಲ್ಲೇ ಸಲ್ಲಿಕೆ ಮಾಡಬಹುದು. ಇದರಿಂದ ರಾಜ್ಯ ಸರ್ಕಾರಕ್ಕೂ ಕೂಡ ರಿಜಿಸ್ಟ್ರೇಷನ್ ಬಗ್ಗೆ ಮಾಹಿತಿ ಸಿಗಲಿದೆ. ಅಲ್ಲದೇ ಜಮೀನು ಅಕ್ರಮಗಳನ್ನು ಕೂಡ ತಡೆಯಬಹುದು. ಯಾರದ್ದೋ ಜಮೀನನ್ನು ಇನ್ನಾರಿಗೋ ನೋಂದಣಿ ಮಾಡಲು ಆಗಲ್ಲ. ಆಡಳಿತ ಸುಧಾರಣೆ ಆಗಬೇಕು, ಜನರಿಗೆ ಸರ್ಕಾರದ ಜೊತೆಗೆ ಸಂಪರ್ಕ ಇದ್ದಾಗ ವಿಳಂಬ ಇಲ್ಲದೆ ಕೆಲಸ ಆಗಬೇಕು ಎಂಬುದು ಸರ್ಕಾರದ ಆಧ್ಯತೆ. ಜನರು ಹಾಗೂ ಸರ್ಕಾರದ ನಡುವೆ ರಿಜಿಸ್ಟ್ರೇಷನ್ ಅತ್ಯಂತ ಪ್ರಮುಖ ಭಾಗ. ನೊಂದಣಿ ಇಲಾಖೆಯಲ್ಲಿ ಬಹಳ ಅಸ್ತವ್ಯಸ್ತತೆ ಇದೆ. ರಿಜಿಸ್ಟ್ರೇಷನ್ ಸಂದರ್ಭದಲ್ಲಿ ಬಹಳಷ್ಟು ವಿಳಂಬ ಆಗುತ್ತಿದೆ. ಜನರು ಅವರ ಆಸ್ತಿ ಅವರು ಮಾರಾಟ ಮಾಡುವುದಕ್ಕೆ ಪಡಬಾರದ ಯಾತನೆ ಅನುಭವಿಸಿದ್ದಾರೆ. ಬಹಳ ವರ್ಷಗಳ ಸುಧಾರಣೆಯಿಂದ ಇದನ್ನು ಬಗೆಹರಿಸಲು ಕಾವೇರಿ-2 ಎಂಬ ಪದ್ದತಿ ತರಲಾಗಿದೆ. ಇದರಿಂದ ತಪ್ಪುಗಳು ಕಡಿಮೆಯಾಗುತ್ತದೆ. ಭ್ರಷ್ಟಾಚಾರಕ್ಕೂ ಕಡಿವಾಣ ಬೀಳಲಿದೆ ಜಮೀನು ಯಾವ ಹೆಸರಿನಲ್ಲಿ ಇದೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತದೆ. ಯಾವುದೇ ವಂಚನೆಗೆ ಅವಕಾಶ ಇಲ್ಲ ಎಂದರು.

Previous article‘ಆದಿಪುರುಷ’ನ ಸಂಭಾಷಣೆಗೆ ಭಾರಿ ಆಕ್ಷೇಪ: ವಿವಾದಿತ ಸಂಭಾಷಣೆ​ ಬದಲಿಸಲು ಚಿತ್ರತಂಡ ನಿರ್ಧಾರ
Next articleಗ್ಯಾರಂಟಿ ಸರ್ಕಾರ ಉಳಿಯಲ್ಲ ಎಂದವರಿಗೆ: ಭಾಷಣ ಮಾಡೋದು ಬಿಡಿ ಎಂದು ತಿರುಗೇಟು