ನಾಪತ್ತೆಯಾಗಿದ್ದ ಸರಕಾರಿ ವೈದ್ಯ ಬಾವಿಯಲ್ಲಿ ಶವವಾಗಿ ಪತ್ತೆ

0
10

ಗದಗ : ಕಳೆದ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಶವವಾಗಿ ಪತ್ತೆಯಾದ ಘಟನೆ ನಡೆದಿದೆ, ಚಿದಾನಂದಯ್ಯ ಬರದೂರಮಠ (45) ಆತ್ಮಹತ್ಯೆಗೆ ಶರಣಾದ ಸರ್ಕಾರಿ ವೈದ್ಯ. ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಿಡಗುಂದಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅವರು ಹಿರಿಯ ಆರೋಗ್ಯ ನಿರೀಕ್ಷಣಾ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಕುಮಾರಸ್ವಾಮಿ ಅವರು ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದರು. ಇದರಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Previous articleಕೇಂದ್ರ ಸರ್ಕಾರ ಒಕ್ಕೂಟ ಧರ್ಮ ಪಾಲನೆ ಮಾಡಬೇಕು
Next article“Every day is not a Sunday”