ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮಹಾಪೌರರ ಆಯ್ಕೆಯ ನಂತರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭಾಶಯದ ಟ್ವೀಟ್ ಮಾಡಿ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ. ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಆಯ್ಕೆಯಾಗಿರುವ ನಮ್ಮ ಪಕ್ಷದ ವೀಣಾ ಬಾರದ್ವಾಡ ಹಾಗೂ ಉಪಮಹಾಪೌರರಾಗಿ ಆಯ್ಕೆಯಾಗಿರುವ ಸತೀಶ ಹಾನಗಲ್‌ರವರಿಗೆ ಹಾರ್ದಿಕ ಅಭಿನಂದನೆಗಳು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸತತ 12ನೇ ಬಾರಿಗೆ ಬಿಜೆಪಿ ಅಭ್ಯರ್ಥಿ ಮಹಾಪೌರರಾಗಿ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ. ಈ ಸಾಧನೆಯ ಹಿನ್ನೆಲೆಯಲ್ಲಿ ಅವಿರತವಾಗಿ ಶ್ರಮಿಸಿರುವ ಸಮಸ್ತ ಕಾರ್ಯಕರ್ತ ಬಂಧುಗಳಿಗೆ ಹಾಗೂ ಪ್ರಮುಖರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದಿದ್ದಾರೆ.