ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ್ದಾರೆ ಎಂಬ ವಂದತಿಗೆ ತೆರೆ ಎಳೆದಿದ್ದಾರೆ. ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ವಿವರಿಸಿದ್ದಾರೆ.