ನೂತನ ಶಾಸಕರಿಗೆ ನಾಳೆಯಿಂದ ತರಬೇತಿ ಶಿಬಿರ

0
12
ವಿಧಾನ ಸೌಧ

ಬೆಂಗಳೂರು: ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ರಾಜ್ಯದ ನೂತನ 70ಜನ ಶಾಸಕರಿಗೆ ಜೂ. 26 ಮತ್ತು 27ರಂದು ಎರಡು ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದೆ. ನೆಲಮಂಗಲದ ಬಳಿ ಇರುವ ಕ್ಷೇಮವನದ ಎಸ್‌ಡಿಎಮ್ ಇನ್‍ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್ ಸೈನ್ಸಸ್ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದು, ತರಬೇತಿಯ ಜೊತೆಗೆ ಪ್ರಕೃತಿ ಚಿಕಿತ್ಸೆಗೂ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಸೋಮವಾರ ಮಧ್ಯಾಹ್ನ 12ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತರಬೇತಿ ಶಿಬಿರದ ಉದ್ಘಾಟನೆ ನೆರವೇರಿಸಲಿದ್ದಾರೆ.

Previous articleಮನೆಗೆ ಬಂದವರನ್ನು ಸ್ವಾಗತಿಸುವುದು ನಮ್ಮ ಪರಂಪರೆ
Next articleಬಿಗಿ ಮಾಡಿದರೂ ನಿಲ್ಲದ ಅಕ್ರಮ ಅಕ್ಕಿ ಸಾಗಣೆ