ಕಲಬುರಗಿಯಲ್ಲಿ ಲೋಕಾಯುಕ್ತ ದಾಳಿ

0
100


ಕಲಬುರಗಿ: ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಬೆಳಂಬೆಳಗ್ಗೆ ಶಾಕ್ ನೀಡಿದ್ದು,
ಭ್ರಷ್ಟ ಅಧಿಕಾರಿ ಶರಣಪ್ಪ ಮಡಿವಾಳ ಅವರ ಕಚೇರಿ ಮತ್ತು ಫಾರ್ಮ್ ಹೌಸ್ ಮೇಲೆ ದಾಳಿ ಮುಂದುವರಿಸಿದ್ದಾರೆ‌.

ಸಿಂಧನೂರು ನಗರ ಮತ್ತು ಯೋಜನಾ ಪ್ರಾಧಿಕಾರ ಸಹಾಯಕ ನಿರ್ದೇಶಕರಾಗಿರುವ ಶರಣಪ್ಪನಿಗೆ ಲೋಕಾಯುಕ್ತರು ಶಾಕ್ ಕೊಟ್ಟಿದ್ದಾರೆ.

ಇಂದು ಬೆಳಗ್ಗೆ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳಿಂದ ಕಲಬುರಗಿ ಹಾಗೂ ಸಿಂಧನೂರಿನಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ.
ಕಲಬುರಗಿ ನಗರದಟ ಹೊರ ವಲಯದಲ್ಲಿನ ಖಣದಾಳ ಬಳಿಯ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿ ಪರಿಶೀಲಿಸುತ್ತಿದ್ದಾರೆ.
ಮೂಲತಃ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಮುನ್ನೊಳ್ಳಿ ಗ್ರಾಮದ ನಿವಾಸಿಯಾಗಿದ್ದು,
ಸಿಂಧನೂರಿನ ಮನೆ ಮೇಲೆ ದಾಳಿ ಮಾಡಲಾಗಿದೆ. ಲೋಕಾ ಎಸ್ಪಿ ಎ.ಆರ್. ಕರ್ನೂಲ್‌ ಮಾಗದರ್ಶನದಲ್ಲಿ ಲೋಕಾ ಎಸ್ ಐ ಅಕ್ಕಮಹಾದೇವಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.

Previous articleಕಾಫಿನಾಡಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ
Next articleಸಿಂಧನೂರ: ಲೋಕಾಯುಕ್ತ ಅಧಿಕಾರಿಗಳ ದಾಳಿ