ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಎಫ್‌ಐಆರ್‌

0
12

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪ ಮೇಲೆ ಬಿಜೆಪಿ ಐಟಿ ಸೆಲ್​ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ರಾಹುಲ್ ಗಾಂಧಿ ವಿರುದ್ಧ ಅಮಿತ್ ಮಾಳವಿಯಾ ಅವರು ಅವಹೇಳನಕಾರಿ ಪೋಸ್ಟ್ ಮಾಡಿದ್ದು, ಇವರ ವಿರುದ್ಧ ಕ್ರಮಕೈಗೋಳ್ಳುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೈಗ್ರೌಂಡ್ಸ್ ಠಾಣೆಗೆ ಜೂನ್ 17ರಂದು ದೂರು ನೀಡಿದ್ದರು. ಇದರ ಆಧಾರದ ಮೇಲೆ ಇದೀಗ ಅಮಿತ್ ಮಾಳವಿಯಾ ವಿರುದ್ಧ ಹೈಗ್ರೌಂಡ್ಸ್ ಠಾಣೆ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ.

Previous articleಪಿಡಬ್ಲೂಡಿ ಇಐ ಪ್ರಕಾಶ್ ಮನೆ ಮೇಲೆ ದಾಳಿ
Next articleಸುಳ್ಳು ಸುದ್ದಿಗಳೆಲ್ಲ ತೊಳೆದು ಹೋಗಲಿದೆ