ಅಕ್ಕಿ ಬದಲು ಹಣ ನೀಡಲು ತೀರ್ಮಾನ

0
13

ಬೆಂಗಳೂರು: ಅಕ್ಕಿ ಬದಲು ಜನರಿಗೆ ಹಣ ನೀಡಲು ಸಂಪುಟ ಸಭೆ ತೀರ್ಮಾನಿಸಿದೆ ಎಂದು ಆಹಾರ ಸಚಿವ ಮುನಿಯಪ್ಪ ತಿಳಿಸಿದ್ದಾರೆ.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ವಿಚಾರ ತಿಳಿಸಿದ ಅವರು, ಸದ್ಯಕ್ಕೆ ಅಕ್ಕಿಯ ಕೊರತೆ ಇರುವ ಹಿನ್ನೆಲೆಯಲ್ಲಿ ಹಣವನ್ನು ನೀಡಲು ತೀರ್ಮಾನಿಸಲಾಗಿದೆ. ಒಂದು ಕೆಜಿ ಅಕ್ಕಿಯ ಬೆಲೆ 34 ರೂ.ಗಳನ್ನು ನಿಗದಿಪಡಿಸಿ, ಪ್ರತಿಯೊಂದು ಕುಟುಂಬಕ್ಕೆ ಅಗತ್ಯವಿರುವಷ್ಟು ಅಕ್ಕಿಯ ಬದಲಿಗೆ ಹಣವನ್ನು ನೀಡಲಾಗುತ್ತದೆ. ಜುಲೈ ತಿಂಗಳಿಂದಲೇ ಪಡಿತರದಾರರ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದರು.

Previous articleಈ ವರ್ಷದ ಭಗವದ್ಗೀತೆ ಅಭಿಯಾನದ ಕೇಂದ್ರಸ್ಥಾನ ಬೆಳಗಾವಿ
Next articleರಾಷ್ಟ್ರೀಯ ಪಕ್ಷಗಳು ಈಸ್ಟ್ ಇಂಡಿಯಾ ಕಂಪನಿಯಂತಾಗಿವೆ