ಬೆಂಗಳೂರು: ಆಪಲ್_ ಐಫೋನ್ ಬಿಡಿಭಾಗಗಳನ್ನು ತಯಾರಿಸುವ ಸಂಸ್ಥೆ ಬೆಳಗಾವಿಯಲ್ಲಿ ಘಟಕ ಸ್ಥಾಪಿಸಲು ಸಿದ್ದವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ ಪಾಟೀಲ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು #ಆಪಲ್_ಐಫೋನ್ ಉತ್ಪಾದಿಸುವ #ಫಾಕ್ಸ್ಕಾನ್ ಕಂಪನಿಗೆ ಬಿಡಿಭಾಗಗಳನ್ನು ತಯಾರಿಸಿಕೊಡುವ SFS ಕಂಪನಿಯು ಬೆಳಗಾವಿಯಲ್ಲಿ 250 ಕೋಟಿ ರೂ. ಬಂಡವಾಳ ಹೂಡಲು ಆಸಕ್ತಿ ತೋರಿದೆ. ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ ಫಾರಸ್ ಶಾ ನೇತೃತ್ವದ ನಿಯೋಗ ಬೆಳಗಾವಿಯಲ್ಲಿ ಘಟಕ ಸ್ಥಾಪಿಸಲು ಭೂಮಿ ಕೋರಿದ್ದು ಈ ಬಗ್ಗೆ ಪರಿಶೀಲಿಸಿ, ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದೆ ಎಂದಿದ್ದಾರೆ.