ಜನರೋಧನೆ ಹೆಸರುಗಳೇ ಸೂಕ್ತ-ಕಾಂಗ್ರೆಸ್​ ವ್ಯಂಗ್ಯ

0
29

ಬೆಂಗಳೂರು: ಬಿಜೆಪಿ ಆಡಳಿತದಲ್ಲಿ ಸರ್ಕಾರದ ಸ್ಪಂದನೆ ಇಲ್ಲದೆ, ಜನರ ರೋಧನೆ ನಡೆಯುತ್ತಿದೆ. ಸಚಿವರಾದ ಅರವಿಂದ್ ಲಿಂಬಾವಳಿ, ಮಾಧುಸ್ವಾಮಿಯಂತವರಿಂದ ಜನರ ನಿಂದನೆ ನಡೆಯುತ್ತಿದೆ ಎಂದು ಬಿಜೆಪಿ ಜನ ಸ್ಪಂದನೆ ಸಮಾವೇಶ ವಿರುದ್ಧ ಕಾಂಗ್ರೆಸ್​ ವ್ಯಂಗ್ಯವಾಡಿದೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಕಾಂಗ್ರೆಸ್​ ನೆರೆ, ಪ್ರವಾಹ, ಬೆಲೆ ಏರಿಕೆಯಂತವುಗಳಿಂದ ಜನರ ವೇದನೆ ನೋಡುತ್ತಿದ್ದೇವೆ. ಬಿಜೆಪಿ ಸಮಾವೇಶಕ್ಕೆ ಜನವೇದನೆ & ಜನರೋಧನೆ ಹೆಸರುಗಳೇ ಸೂಕ್ತ. ಸರ್ಕಾರ ಪರ್ಸೆಂಟೇಜ್ ಮೇಲೆ ನಡೆಯುತ್ತಿದೆಯೇ ಗುತ್ತಿಗೆದಾರರು, ಜನಸಾಮಾನ್ಯರ ನಂತರ ಹೈಕೋರ್ಟ್ ಕೂಡ 40% ಸರ್ಕಾರದ ಪರ್ಸೆಂಟೇಜ್ ಬಗ್ಗೆ ಮಾತಾಡುತ್ತಿದೆ. ಸಿಎಂ ಬೊಮ್ಮಾಯಿ ಅವರೇ ಇಂತಹ ನಾಚಿಕೆಗೇಡಿನ ಸಂಗತಿ ಎದುರಿಟ್ಟುಕೊಂಡು ಯಾವ ಪುರುಷಾರ್ಥಕ್ಕೆ ಸಮಾವೇಶ ನಡೆಸುತ್ತಿದ್ದೀರಿ..? ನಾಡಿನ ಎದುರು ತಲೆ ತಗ್ಗಿಸಬೇಕಾದ ಸಮಯವಿದು ಎಂದು ಕಿಡಿಕಾರಿದೆ.

Previous articleಜನ ಸ್ಪಂದನ ಸಮಾವೇಶಕ್ಕೆ ಈಶ್ವರಪ್ಪ ಗೈರು..!
Next articleಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ನಿರ್ಮೂಲನೆಯಾಗಲಿದೆ