ಹುಬ್ಬಳ್ಳಿ : ಪತಿಯೇ ಪತ್ನಿಯ ತಲೆಗೆ ಕೊಡಲಿಯಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಆನಂದನಗರದ ಬ್ಯಾಹಟ್ಟಿ ಪ್ಲಾಟ್‌ನಲ್ಲಿ ಸೋಮವಾರ ಬೆಳಗ್ಗೆ ನಡೆದಿದ್ದು, ಜನರು ಬೆಚ್ಚಿ ಬಿದಿದ್ದಾರೆ. ಮೊನ್ನೆಯಷ್ಟೇ ಪತಿ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿದ ಪ್ರಕರಣ ಮಾಸುವ ಮುನ್ನವೇ ಇಂದು ಬೆಳ್ಳಂಬೆಳಿಗ್ಗೆ ಮತ್ತೊಮ್ಮೆ ನೆತ್ತರು ಹರಿದಿದ್ದು, ಭೀಕರ ಘಟನೆಗೆ ವಾಣಿಜ್ಯ ನಗರ ಹುಬ್ಬಳ್ಳಿ ಸಾಕ್ಷಿಯಾಗಿದೆ. ಭೀಮಪ್ಪ ಮುತ್ತಲಗಿ ಎಂಬಾತನೇ ತನ್ನ ಪತ್ನಿ ಮಂಜುಳಾ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಯು ಭೀತಿಗೊಂಡು ತಾನೇ ಪೊಲೀಸರಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಹಳೇಹುಬ್ಬಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ದುರ್ಘಟನೆಗೆ ಸಂಬಂಧಿಸಿದಂತೆ ಕೌಟುಂಬಿ ಕಲಹವೆಂದು ತಿಳಿದು ಬಂದಿದೆ.



























