ಕಾನೂನಿನ ಕೈಗಳಿಗೆ ಇನ್ನಷ್ಟು ಬಲ

0
18

ಬೆಂಗಳೂರು: ಕಾನೂನಿನ ಕೈಗಳಿಗೆ ಇನ್ನಷ್ಟು ಬಲ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ, ಇತ್ತಿಚೆಗೆ ನಡೆದ ಅಪರಾಧ ಕೃತ್ಯಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿರುವ ಅವರು * ದುಡ್ಡಿನ ವ್ಯವಹಾರದ ಕಾರಣಕ್ಕಾಗಿ ನಡೆದಿದೆ ಎನ್ನಲಾದ ಜೈನಮುನಿ ಕಾಮಕುಮಾರ ನಂದಿ ಮಹರಾಜರ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 6 ಗಂಟೆಗಳ ಒಳಗೆ ಬಂಧಿಸಲಾಗಿದೆ.

ವೈಯಕ್ತಿಕ ದ್ವೇಷದ ಕಾರಣಕ್ಕಾಗಿ ಟಿ. ನರಸೀಪುರದ ವೇಣುಗೋಪಾಲ್ ಅವರನ್ನು ಹತ್ಯೆಗೈದ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದೆ.

  • ಬೆಂಗಳೂರಿನ ಏರೋನಿಕ್ಸ್ ಸಂಸ್ಥೆಯ ಎಂ.ಡಿ ಹಾಗೂ ಸಿ.ಇ.ಒ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಗಳೊಳಗೆ ಬಂಧಿಸಲಾಗಿದೆ.
    ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿ, ಅಪರಾಧಿಗಳಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ರಾಜ್ಯದ ಪೊಲೀಸ್ ಇಲಾಖೆ ಸಮರ್ಥವಾಗಿದೆ. ಈ ಬಗ್ಗೆ ಯಾವ ಸಂದೇಹವೂ ಬೇಡ. ಹತ್ಯೆ, ಅಪಹರಣ ಮುಂತಾದ ಅಪರಾಧ ಕೃತ್ಯಗಳು ದುರದೃಷ್ಟಕರ. ಆದರೆ ಒಂದು ಸರ್ಕಾರವಾಗಿ ಇಂಥ ಕಾನೂನು ವಿರೋಧಿ ಕೃತ್ಯಗಳು ನಡೆಯದಂತೆ ತಡೆಯಲು ನಾವು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ. ಇದಕ್ಕಾಗಿ ಕಾನೂನಿನ ಕೈಗಳಿಗೆ ಇನ್ನಷ್ಟು ಬಲ ನೀಡಲಾಗುವುದು ಎಂದಿದ್ದಾರೆ.
Previous articleತಿರುಪತಿ ದೇವಸ್ಥಾನಕ್ಕೆ ಇಸ್ರೊ ವಿಜ್ಞಾನಿಗಳ ತಂಡ ಭೇಟಿ
Next articleಕೇಂದ್ರದಿಂದ ಬರುವ ಅಕ್ಕಿ ಕಡಿತ ಮಾಡಿರುವ ರಾಜ್ಯ ಸರ್ಕಾರದಿಂದ ಬಡವರಿಗೆ ಅನ್ಯಾಯ