ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 14 ನೇ ಬಜೆಟನ್ನು ಶ್ಲಾಘಿಸಿ ಡಿ.ವೀರೇಂದ್ರ ಹೆಗ್ಗಡೆಯವರು ಪತ್ರ ಬರೆದಿದ್ದು ಅದನ್ನು ಇಂದು ಸ್ವತಃ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂತಸ ಪಡಿಸಿ ಟ್ವೀಟ್ ಮಾಡಿದ್ದಾರೆ ಅವರು ತಮ್ಮ ಟ್ವೀಟ್ ನಲ್ಲಿ “ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ಡಿ.ವೀರೇಂದ್ರ ಹೆಗ್ಗಡೆಯವರು ನಾನು ಮಂಡಿಸಿದ 14 ನೇ ಬಜೆಟ್ ನ ಫಲಶೃತಿಯನ್ನು ಶ್ಲಾಘಿಸಿ ಹಾಗೂ ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ಸೂಚಿಸಿ ಬರೆದಿರುವ ಪತ್ರಕ್ಕೆ ಧನ್ಯವಾದಗಳು.” ಎಂದಿದ್ದಾರೆ.