ಬಿಸಿಯೂಟ ಕಾರ್ಯಕರ್ತೆಯರಿಗೆ ಬಳೆ ನಿಷೇಧ: ಸಿಎಂ ಸ್ಪಷ್ಟನೆ

0
15

ಬೆಂಗಳೂರು: ಬಿಸಿಯೂಟ ಕಾರ್ಯಕರ್ತೆಯರು ಬಳೆ ತೊಡುವುದನ್ನು ರಾಜ್ಯ ಸರ್ಕಾರ ನಿಷೇಧ ಮಾಡಿದೆ ಎಂದು ಸುಳ್ಳು ಸುದ್ದಿ ಹರಡಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಅವರು, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಾರ್ಗ ಸೂಚಿಯನ್ನು ಪ್ರಕಟಿಸಿದೆ ಎನ್ನುವ ಸುಳ್ಳು ಸುದ್ದಿಯನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ವಾಸ್ತವದಲ್ಲಿ ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿದೆ ಎಂದು ಹೇಳಿದ್ದಾರೆ.

Previous articleಬಿಜೆಪಿಯೊಂದಿಗೆ ಜೆಡಿಎಸ್‌ ಮೈತ್ರಿ ಬದಲು ವಿಲೀನ ಮಾಡಿಕೊಳ್ಳಲಿ
Next articleಕೇಂದ್ರ ವಿಪಕ್ಷ ನಾಯಕರ ಸಭೆ: ಸಿದ್ಧತೆ ಪರಿಶೀಲಿಸಿದ ಸಿಎಂ