ಬೆಂಗಳೂರು: ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಹೇಳಿದ್ದಾರೆ, ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ. ಇಂಗ್ಲಿಷಿನಲ್ಲಿ ಹೇಳಬಹುದಾದರೆ, ” I am wedded to the party and ideology – no compromise ” ಎಂದಿದ್ದಾರೆ.
ಕಾಂಗ್ರೆಸ್ ಸೇರ್ಪಡೆ ಸುದ್ದಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ ಎಂದು ಹೇಳಿದ್ದಾರೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ತೇಜಸ್ವಿನಿ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು ಸುದ್ದಿ ಹಬ್ಬಿತ್ತು.