ನಿರಂತರ ಮಳೆ: ನಾಳೆ ಕೊಪ್ಪಳದಲ್ಲಿ ಶಾಲಾ-ಕಾಲೇಜಿಗೆ ರಜೆ

0
6

ಕೊಪ್ಪಳ: ನಿರಂತರ ಮಳೆಯಿಂದಾಗಿ ಗುರುವಾರ ಶಾಲೆ, ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಸತತವಾಗಿ ಮಳೆಯಾಗುತ್ತಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮಳೆ ಸುರಿಯುವುದಾಗಿ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಗೂ ಮಕ್ಕಳು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾಗಿ ಜುಲೈ 27ರಂದು ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ, ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು ಆದೇಶ ಹೊರಡಿಸಿದ್ದಾರೆ.

Previous articleಕಷ್ಣಾನದಿ ತೀರದಲ್ಲಿ ಮೊಸಳೆಗಳ ಹಿಂಡು ಪ್ರತ್ಯಕ್ಷ
Next articleರಾಯಚೂರು: ನಾಳೆ ಶಾಲೆಗಳಿಗೆ ರಜೆ ಘೋಷಣೆ