ಮಹದಾಯಿ ನ್ಯಾಯಮಂಡಳಿ ಅವಧಿ ವಿಸ್ತರಣೆ

0
10

ನವದೆಹಲಿ: ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ನಡುವಿನ ನೀರು ಹಂಚಿಕೆ ವಿವಾದ ಪರಿಹರಿಸಲು ಸ್ಥಾಪಿಸಲಾದ ಮಹದಾಯಿ ಜಲ ವಿವಾದಗಳ ನ್ಯಾಯಮಂಡಳಿ ತನ್ನ ವರದಿ ಮತ್ತು ನಿರ್ಧಾರವನ್ನು ಸಲ್ಲಿಸಲು ಮತ್ತೊಂದು ವರ್ಷ ಅವಧಿ ವಿಸ್ತರಣೆ ಮಾಡಿದೆ.
ಈ ಕುರಿತು ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಿದ್ದು, 20 ಆಗಸ್ಟ್, 2023 ರಿಂದ ಜಾರಿಗೆ ಬರುವಂತೆ ಈ ಟ್ರಿಬ್ಯೂನಲ್ ಮುಂದಿನ ವರದಿಯನ್ನು ಸಲ್ಲಿಸುವ ಅವಧಿಯನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಿದೆ.
ಈಗಾಗಲೇ ನ್ಯಾಯಮಂಡಳಿಯು ಅಂತಿಮ ವರದಿ ಸಲ್ಲಿಸಿದ್ದರೂ, ವರದಿಯಲ್ಲಿ ಮಾರ್ಪಾಡು ಕೋರಿ ಕರ್ನಾಟಕ ಮತ್ತು ಗೋವಾ ಎರಡೂ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಬಾಕಿ ಇದೆ.

Previous articleಪ್ರತಿಪಕ್ಷಗಳು ಪಕ್ಷಪಾತ ರಾಜಕಾರಣಕ್ಕೆ ಆದ್ಯತೆ ನೀಡಿರುವುದು ದುರದೃಷ್ಟಕರ
Next articleಬಸವಸಾಗರ ಜಲಾಶಯದಿಂದ 1,15,000 ಕ್ಯೂಸೆಕ್‌ ನೀರು ಬಿಡುಗಡೆ