ಒಳ ಮೀಸಲಾತಿ ಜಾರಿ ನಮಗೆ ಬದ್ದತೆ ಇದೆ : ಕಾಂಗ್ರೆಸ್‌ನಿಂದ ಪಾಠ ಕಲಿಯಬೇಕಿಲ್ಲ

0
12

ಹಾವೇರಿ: ಕಾಂಗ್ರೆಸ್ ‌ಮೊದಲಿನಿಂದಲೂ ಒಳ ಮೀಸಲಾತಿ ವಿರೋಧಿಯಾಗಿದೆ. ನಾವು ಸಂವಿಧಾನಕ್ಕೆ ತಿದ್ದುಪಡಿ ತಂದು ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದೇವೆ. ನಮಗೆ ಬದ್ದತೆ ಇದೆ. ಕಾಂಗ್ರೆಸ್ ನವರಿಂದ ಪಾಠ ಕಲಿಯಬೇಕಿಲ್ಲ ಒಳ ಮೀಸಲಾತಿ ವಿರೋಧಿಸುವ ಕಾಂಗ್ರೆಸ್ ನವರ ಬಣ್ಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಅವಕಾಶ ವಿಚಾರದಲ್ಲಿ ಕಾಂಗ್ರೆಸ್ ‌ಸದಾ ಗೊಂದಲ ಸೃಷ್ಟಿಸುತ್ತ ಬಂದಿದೆ‌. ಹಿಂದಿನ ಚುನಾವಣೆಯಲ್ಲಿ ಪ್ರಣಾಳಿಕೆಯಲ್ಲಿ ಘೋಷಿಸಿ ಕೈಬಿಟ್ಟರು, ಒಳಮೀಸಲಾತಿ ಪರ ಬಂದವರಿಗೆ ಜಾರಿ ಮಾಡುತ್ತೇವೆ ಎನ್ನುವುದು, ಅದನ್ನು ವಿರೋಧಿಸುವವರು ಬಂದಾಗ ಜಾರಿ ಮಾಡುವುದಿಲ್ಲ ಎನ್ನುವುದು ಎಲ್ಲವೂ ಬಹಿರಂಗವಾಗಿದೆ. ಅವರಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದರು.
ಕೇಂದ್ರ ಸಚಿವ ಸಚಿವ ನಾರಾಯಣಸ್ವಾಮಿ ಅವರು ಪ್ರಸ್ತುತ ಒಳ ಮೀಸಲಾತಿಗೆ ಅವಕಾಶ ಇಲ್ಲ ಅಂತ ಹೇಳಿದ್ದಾರೆ. ನಾವೂ ಕೂಡ ಸಂವಿಧಾನದ ಆರ್ಟಿಕಲ್ 140 ಗೆ ಕ್ಲಸ್ 2 ಹಾಕಿ ತಿದ್ದುಪಡಿ ಮಾಡಿ ಒಳ ಮೀಸಲಾತಿ ಜಾರಿಗೊಳಿಸುವಂತೆ ರಾಜ್ಯ ಪಾಲರ ಮೂಲಕ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದೇವೆ. ಈ ಪ್ರಕರಣ ಕೋರ್ಟ್ ನಲ್ಲಿದೆ. ಆದರೆ, ನಮಗೆ ಬದ್ದತೆ ಇದೆ. ಅದಕ್ಕಾಗಿಯೇ ಸಂವಿಧಾನ ತಿದ್ದುಪಡಿಗೆ ಶಿಫಾರಸ್ಸು ಮಾಡಿದ್ದೇವೆ. ಮೊದಲಿನಿಂದಲೂ ಒಳ ಮೀಲಸಾತಿ ವಿರೋಧಿಸುತ್ತಿರುವ ಕಾಂಗ್ರೆಸ್ ನ ಬಣ್ಣ ಬಯಲಾಗಿದೆ ಎಂದು ವಾಗ್ದಾಳಿ ನಡೆಸಿದರು.

Previous articleವಿಜಯಪುರ ವಿಮಾನ ನಿಲ್ದಾಣ: ಫೆಬ್ರವರಿ 2024ರ ವೇಳೆಗೆ ಪೂರ್ಣ
Next articleಹೆಣ್ಣುಮಕ್ಕಳ ವಿಚಾರದಲ್ಲಿ ಹಗುರವಾಗಿ ಮಾತನಾಡುವುದು ಸಲ್ಲ