ಶಕ್ತಿ ಯೋಜನೆ ಫಲ: ಸಾರಿಗೆ ನೌಕರರಿಗೆ ಅರ್ಧ ಸಂಬಳ

0
13

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆ ಫಲಶೃತಿ ಸಾರಿಗೆ ನೌಕರರಿಗೆ ಅರ್ಧ ಸಂಬಳ ಮಾತ್ರ ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಶಕ್ತಿ ಯೋಜನೆ ಜಾರಿಯಾದ ಮೊದಲ ತಿಂಗಳಿನಿಂದಲೇ ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ಆರ್ಥಿಕ ಬರೆಯನ್ನು ಎಳೆದಿದೆ. ಗ್ಯಾರೆಂಟಿ ಯೋಜನೆಗಳಿಗೆ ಪೂರ್ಣ ಪ್ರಮಾಣದಲ್ಲಿ ಹಣ ಒದಗಿಸಿದ್ದೇವೆ ಎಂಬ ಹೇಳಿಕೆ ಮೊದಲನೇ ತಿಂಗಳು ಹುಸಿಯಾಗಿದೆ ಎಂದು ತಿಳಿಸಿದ್ದಾರೆ.
ಬರುವಂತ ದಿನಗಳಲ್ಲಿ ಸಾರಿಗೆ ನಿಗಮಗಳು ಬಸ್‌ಗಳನ್ನು ಡಿಸೆಲ್ ಇಲ್ಲದೆ ನಿಲ್ಲಿಸುವಂತದ್ದು, ಸಾರಿಗೆ ನೌಕರರು ಸಂಬಳ ಇಲ್ಲದೆ ದುಡಿಯುವಂತದ್ದು, ಕೆಟ್ಟ ಬಸ್‌ಗಳು ರಸ್ತೆಯಲ್ಲಿ ನಿಲ್ಲುವ ದಿನಗಳು ದೂರವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

Previous articleನಮ್ಮ ಹಿಂದೆ ಓಡಾಡಿದವರೆಲ್ಲ ಮಂತ್ರಿಯಾಗಿದ್ದಾರೆ
Next article25 ಕ್ಷೇತ್ರ ಗೆಲ್ಲುವ ಗುರಿಯೊಂದಿಗೆ ಹೋರಾಡಿ