ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆ 243 ರಿಂದ 225ಕ್ಕೆ

0
17

ಬೆಂಗಳೂರು: ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 225ಕ್ಕೆ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಬಿಜೆಪಿ ಸರ್ಕಾರ 243 ವಾರ್ಡ್‌ಗಳನ್ನಾಗಿ ವಿಂಗಡನೆ ಮಾಡಿತ್ತು. ತತ್‌ಕ್ಷಣದಿಂದ ಜಾರಿಗೆ ಬರುವಂತೆ ಈ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ ಎಂದು ರಾಜ್ಯ ಸರ್ಕಾರ ಹೊರಡಿಸಿದ ಪತ್ರದಲ್ಲಿ ತಿಳಿಸಲಾಗಿದೆ. ವಾರ್ಡ್ ಸಂಖ್ಯೆ ನಿಗದಿಪಡಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ ಬಿಜೆಪಿ ಸರ್ಕಾರ ಮಾಡಿದ್ದ ವಾರ್ಡ್ ಮರು ವಿಂಗಡನೆ ಬಗ್ಗೆ ಸಾಕಷ್ಟು ಟೀಕೆ ಗ್ರಾಸವಾಗಿತ್ತು. ಅದನ್ನು ಸಿದ್ದರಾಮಯ್ಯ ಸರ್ಕಾರ ವಾಪಸ್ ಪಡೆದುಕೊಂಡಿದೆ. ಬಿಜೆಪಿ ಸರ್ಕಾರ ಮಾಡಿದ ವಾರ್ಡ್ ವಿಂಗಡನೆಯಲ್ಲಿ ಅನೇಕ ದೂರುಗಳು ಬಂದ ಹಿನ್ನಲೆಯಲ್ಲಿ ಹಳೆ ವಾರ್ಡ್ ವಿಂಗಡನೆ ರದ್ದು ಮಾಡಿ ಮತ್ತೆ ಹೊಸದಾಗಿ ವಾರ್ಡ್‌ಗಳನ್ನು ವಿಂಗಡನೆ ಮಾಡುವಂತೆ ಕೋರ್ಟ್ ಆದೇಶ ನೀಡಿತ್ತು.

Previous articleಇನ್ನು “ಪ್ರಸಾದ” ತಲುಪಿಲ್ಲವಾ?
Next article“ಗೃಹಜ್ಯೋತಿ ಯೋಜನೆ”ಗೆ ಚಾಲನೆ: ಶೂನ್ಯ ಬಿಲ್ ವಿತರಣೆ