ಕಾವೇರಿ ನೀರು ಹಂಚಿಕೆ: ರಾಜ್ಯದ ಹಿತ ಗಮನದಲ್ಲಿಟ್ಟುಕೊಂಡು ತೀರ್ಮಾನ

0
15

ಶ್ರೀರಂಗಪಟ್ಟಣ: ಕಾವೇರಿ ನೀರು ಹಂಚಿಕೆ ವಿಷಯವಾಗಿ ರಾಜ್ಯದ ಹಿತ, ಸುಪ್ರೀಂ ಕೋರ್ಟ್ ತೀರ್ಪು, ಕಾವೇರಿ ನ್ಯಾಯಾಧೀಕರಣಗಳ ತೀರ್ಮಾನಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ 24 ಗಂಟೆಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಮತ್ತು ಕಾವೇರಿ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಚಲುವರಾಯಸ್ವಾಮಿ ತಿಳಿಸಿದರು.
ಶ್ರೀರಂಗಪಟ್ಟಣ ತಾಲ್ಲೂಕು ಕೆಆರ್‌ಎಸ್‌ನಲ್ಲಿನ ಕಾವೇರಿ ಸಭಾಂಗಣದಲ್ಲಿ ನೀರು ಹಂಚಿಕೆ ಸಂಬಂಧ ಮಂಡ್ಯ-ಮೈಸೂರು ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಸ್ತುತ ಕನ್ನಂಬಾಡಿ ಅಣೆಕಟ್ಟೆಯಲ್ಲಿ‌113 ಅಡಿಗಳಷ್ಟು ನೀರಿನ‌ ಸಂಗ್ರಹಣೆಯಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ರಾಜ್ಯದ ಜನತೆಗೆ ಕುಡಿಯುವ ನೀರು ಪೂರೈಕೆ, ನಾಲೆಗಳಿಗೆ ನೀರು ಹರಿಸುವ ಸಂಬಂಧ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದರು.
ನೀರಾವರಿ ಸಚಿವ ಎಚ್.ಸಿ. ಮಹದೇವಪ್ಪ,‌ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ಜಿ.ಟಿ.ದೇವೇಗೌಡ, ಮಂಜು,‌ ಗಣಿಗ ರವಿಕುಮಾರ್, ಕದಲೂರು ಉದಯ್, ಗೂಳಿಗೌಡ, ಮರಿತಿಬ್ಬೇಗೌಡ, ಮಧು ಮಾದೇಗೌಡ ಸೇರಿದಂತೆ ಜಿಲ್ಲಾಧಿಕಾರಿಗಳು ಹಾಗೂ ಕೃಷಿ ಅಧಿಕಾರಿಗಳು ಇತರರಿದ್ದರು.

Previous articleರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಮರುಸ್ಥಾಪನೆ: ‘ಇಂಡಿಯಾ’ ಮೈತ್ರಿಕೂಟ ಸಂಭ್ರಮಾಚರಣೆ
Next articleಸಿದ್ದರಾಮಯ್ಯ ರೈತರ ದ್ರೋಹಿ