ಫೇಕ್ ಫ್ಯಾಕ್ಟರಿಯೋ ಅಥವಾ ಪೆನ್ ಡ್ರೈವ್ ಶೂರರೋ

0
14

ಬೆಂಗಳೂರು: ಅಧಿಕಾರಿಗಳ ಹೆಸರಲ್ಲಿ ನಕಲಿ ದೂರುಗಳಿಗೆ ಸಂಬದಿಸಿದಂತೆ ಕರ್ನಾಟಕ ಕಾಂಗ್ರೆಸ್‌ ಪ್ರತಿಕ್ರಿಯೆ ನೀಡಿದ್ದು ಈ ಕುರಿತು ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌ ನಕಲಿ ಪೆನ್ ಡ್ರೈವ್ ಆಯ್ತು,
ಶಾಸಕ ಬಿ ಆರ್ ಪಾಟೀಲ್ ಹೆಸರಿನ ನಕಲಿ ಪತ್ರ ಆಯ್ತು, ಈಗ ಅಧಿಕಾರಿಗಳ ಹೆಸರಲ್ಲಿ ನಕಲಿ ದೂರು! ಸರ್ಕಾರವನ್ನು ಎದುರಿಸಲು ಅಸಲಿ ವಿಷಯಗಳಿಲ್ಲದೆ ವಿಪಕ್ಷಗಳು ನಕಲಿ ವಿಷಯ ಸೃಷ್ಟಿಸಿ ಹೆದರಿಸಲು ಮುಂದಾಗಿವೆ.
ಪತ್ರದಲ್ಲಿ ಹೆಸರಿಸಿರುವ ಅಧಿಕಾರಿಗಳು ಯಾರೂ ಮಂಡ್ಯದಲ್ಲಿಲ್ಲ, ಈ ಪತ್ರದ ಕುರಿತು ಮಾಹಿತಿಯೂ ಮಂಡ್ಯದ ಅಧಿಕಾರಿಗಳಿಗಿಲ್ಲ ಎಂದು ಖಚಿತಪಡಿಸಿದ್ದಾರೆ, ಈ ನಕಲಿ ಪತ್ರಗಳ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಿದೆ.
ಇದರ ಹಿಂದಿರುವುದು ಕರ್ನಾಟಕ ಬಿಜೆಪಿಯ ಫೇಕ್ ಫ್ಯಾಕ್ಟರಿಯೋ ಅಥವಾ ಪೆನ್ ಡ್ರೈವ್ ಶೂರರೋ ಎಂಬುದನ್ನು ಬಯಲಿಗಿಡುತ್ತೇವೆ ಎಂದಿದ್ದಾರೆ.

Previous articleಹುಬ್ಬಳ್ಳಿಯಲ್ಲಿ ಅಂತರಾಜ್ಯ ಡ್ರಗ್ ಪೆಡ್ಲರ್‌ ಬಂಧನ
Next articleರಾಜ್ಯದ ಜನರಿಗೆ ಈಗ ಭ್ರಷ್ಟಾಚಾರದ ಗ್ಯಾರಂಟಿ ಸಿಕ್ಕಿದೆ