20ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ

0
15

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್‌ 20ರಂದು ಬೆಳಗಾವಿಯಲ್ಲಿ ಸಾಂಕೇತಿಕ ಚಾಲನೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಆಗಸ್ಟ್‌ 20ರಂದು ಗೃಹಲಕ್ಷ್ಮಿ ಯೋಜನೆಗೆ ಬೆಳಗಾವಿಯಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಲಾಗುವುದು. ಅದೇ ದಿನ ಪ್ರತಿಯೊಂದು ಪಂಚಾಯತಿ, ವಾರ್ಡ್‌, ಗ್ರಾಮ ಹಾಗೂ ಕ್ಷೇತ್ರದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಈ ಯೋಜನೆಯನ್ನು ಪಕ್ಷಾತೀತವಾಗಿ ಜನರಿಗೆ ತಲುಪಿಸುವ ಪ್ರಯತ್ನ ಮಾಡಬೇಕು ಎಂದು ಹೇಳಿದ್ದಾರೆ.

Previous articleಮಾಜಿ ಸಚಿವ ರೇವಣ್ಣ ಆಪ್ತನ ಭೀಕರ ಕೊಲೆ
Next articleಕರ್ಣಾಟಕ ಬ್ಯಾಂಕ್ ಮಾಜಿ ಎಂ,ಡಿ. ಸಿ.ಇ.ಒ. ಜಯರಾಮ ಭಟ್ ಇನ್ನಿಲ್ಲ