ಅಪಘಾತ: ನಾಲ್ವರು ಸಾವು, ಮೂವರು ಗಂಭೀರ

0
9

ಚಿತ್ರದುರ್ಗ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಡೆದಿದೆ.
ಬಾಲಕ ಸೇರಿ ನಾಲ್ವರು ಮೃತಪಟ್ಟಿದ್ದು, ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದೆ. ಸಂಗನಬಸಪ್ಪ(36), ರೇಖಾಂಶ(29) ಭೀಮಾಶಂಕರ್(26), ಅಗಸ್ತ್ಯ(8) ಮೃತಪಟ್ಟವರೆಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಚಿತ್ರದುರ್ಗ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Previous articleಟಿ20 ಕ್ರಿಕೆಟ್: ಭಾರತಕ್ಕೆ ಭರ್ಜರಿ ಗೆಲುವು
Next articleಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ