ಮಂಗಳೂರು: ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದೆ. ಕೇರಳದ ಮಲಪ್ಪುರಂ ನಿವಾಸಿ ಮೊಹಮ್ಮದ್ ಜಲೀಲ್ (೩೯) ಎಂಬವರ ಮೇಲೆ ಹಲ್ಲೆ ನಡೆದಿದ್ದು, ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಲೀಲ್ ಎಂಬಾತ ಮೂರು ತಿಂಗಳ ಹಿಂದೆ ಸುಳ್ಯ ತಾಲೂಕಿನ ಅರಂತೋಡಿನಲ್ಲಿ ರಬ್ಬರ್ ತೋಟವನ್ನು ಗುತ್ತಿಗೆ ಪಡೆದು ಸದ್ಯ ಅಲ್ಲಿಯೇ ವಾಸವಾಗಿದ್ದಾರೆ. ಇವರ ಪರಿಚಯದ ಯುವತಿಯೊಬ್ಬಳು ತಾನು ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದು ತನಗೆ ವಿಶ್ರಾಂತಿ ಪಡೆಯಲು ರೂಂ ಬೇಕೆಂದು ಕೇಳಿಕೊಂಡ ಮೇರೆಗೆ ಜಲೀಲ್ ಅಸುಳ್ಯದಲ್ಲಿ ರೂಂ ವ್ಯವಸ್ಥೆ ಮಾಡಿದ್ದರು. ಬಳಿಕ ವೈಯಕ್ತಿಕ ಕೆಲಸ ನಿಮಿತ್ತ ಸುಳ್ಯ ತಾಲೂಕಿನ ತೋಡಿಕಾನಕ್ಕೆ ತೆರಳಿದ್ದಾಗ ೫ ಜನರ ತಂಡವೊಂದು ಕಾರು ಮತ್ತು ಸ್ಕೂಟರ್‌ನಲ್ಲಿ ಬಂದು ಜಲೀಲ್ ಅವರ ಕಾರನ್ನು ತಡೆದು ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿ ತೆರಳಿದ್ದಾರೆ ಎಂದು ಆರೋಪಿಸಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇವರ ಪೈಕಿ ಮೂವರ ಹೆಸರನ್ನು ಲತೀಶ್ ಗುಂಡ್ಯ, ವರ್ಷಿತ್ ಹಾಗೂ ಪುನೀತ್ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ ೮೭/೨೦೨೩ ಕಲಂ ೧೪೩, ೧೪೭, ೩೪೧, ೩೨೩, ೫೦೪, ೫೦೬, ೧೫೩(ಂ) ಜೊತೆಗೆ ೧೪೯ ಐಪಿಸಿಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿಗಳ ಪೈಕಿ ಸುಳ್ಯ ಸೊಣಂಗೇರಿ ನಿವಾಸಿ ಪುನೀತ್ ಎಂಬಾತನನ್ನು ಬಂಧಿಸಲಾಗಿದೆ.