ಶಾಲಾ ವಾಹನದಡಿ ಬಿದ್ದು ವಿದ್ಯಾರ್ಥಿನಿ ಸಾವು

0
8
ಸಾವು


ಕಾಸರಗೋಡು: ಶಾಲಾ ವಾಹನದಡಿಗೆ ಬಿದ್ದು ನರ್ಸರಿ ವಿದ್ಯಾರ್ಥಿನಿ ಮೃತಪಟ್ಟ ದಾರುಣ ಘಟನೆ ಇಂದು ಮಧ್ಯಾಹ್ನ ಕಂಬಾರ್ ಸಿರಿಬಾಗಿಲು ಎಂಬಲ್ಲಿ ನಡೆದಿದೆ. ಸಿರಿಬಾಗಿಲಿನ ಮುಹಮ್ಮದ್ ಸುಬೈರ್ ರವರ ಪುತ್ರಿ ಆಯಿಷಾ ಸೆಯಾ (೪) ಮೃತ ಪಟ್ಟವಳು.
ಮನೆ ಸಮೀಪ ಈ ದುರಂತ ನಡೆದಿದೆ ಶಾಲೆ ಬಿಟ್ಟು ಮನೆ ಬಳಿ ಬಾಲಕಿಯನ್ನು ಇಳಿಸಿ ಬಸ್ಸನ್ನು ಹಿಂದಕ್ಕೆ ತೆಗೆಯು ತ್ತಿದ್ದಾ ಗ ಅದೇ ಬಸ್ಸಿನಡಿ ಸಿಲುಕಿ ಈ ಘಟನೆ ನಡೆದಿದೆ. ಸ್ಥಳೀಯರು ಧಾವಿಸಿ ಬಂದು ಕೂಡಲೇ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದಳು. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಬಾಲಕಿ ನೆಲ್ಲಿಕುಂಜೆ ಖಾಸಗಿ ಶಾಲೆಯ ನರ್ಸರಿ ವಿದ್ಯಾರ್ಥಿನಿಯಾಗಿದ್ದಳು.

Previous articleಪೊಲೀಸ್ ಠಾಣೆ ಸಮೀಪವೇ ಇರಿತ ಯುವತಿ ಸಾವು
Next articleನಾಲ್ಕು ಸಾವಿರ ಕೂಸಿನ ಮನೆ