ನವದೆಹಲಿ: ಕಾವೇರಿ ನೀರಿನ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 01ಕ್ಕೆ ಮುಂದೂಡಿದೆ. ಕಾವೇರಿ ನೀರಿಗಾಗಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿ ಎರಡು ರಾಜ್ಯಗಳ ಜಲಾಶಯಗಳ ವಾಸ್ತವ ವರದಿ ಸಲ್ಲಿಸುವಂತೆ ಕಾವೇರಿ ನಿರ್ವಹಣಾ ಪ್ರಾದಿಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು ಪ್ರಕರಣದ ವಿಚಾರಣೆಯನ್ನು ಮುಂದಿನ ವಾರ ಶುಕ್ರವಾರ ಸೆಪ್ಟೆಂಬರ್ 01ಕ್ಕೆ ಸುಪ್ರೀಂಕೋರ್ಟ್ ಮುಂದೂಡಿದೆ.