ನವದೆಹಲಿ: ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 200 ರೂಪಾಯಿ ಕಡಿತಗೊಳಿಸಲು ಕೇಂದ್ರ ಸಚಿವ ಸಂಪುಟ ಮಂಗಳವಾರ ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳು ಪ್ರತಿ ಸಿಲಿಂಡರ್‌ಗೆ ರೂ 400 ವರೆಗೆ ಒಟ್ಟು ಪ್ರಯೋಜನಗಳನ್ನು ಪಡೆಯುತ್ತಾರೆ, ಕೋಟ್ಯಂತರ ಭಾರತೀಯ ಸಹೋದರಿಯರಿಗೆ ರಾಖಿ ಉಡುಗೊರೆಯಾಗಿದೆ ಎಂದು ಅವರು ಹೇಳಿದ್ದಾರೆ.