ದಡೇಸುಗೂರು ವಿರುದ್ಧ ಮತ್ತೊಂದು ದಾಖಲೆ ಬಿಡುಗಡೆ: ತಂಗಡಗಿ

0
29
ತಂಗಡಗಿ

ಬಿಜೆಪಿ ಶಾಸಕ ಬಸವರಾಜ್ ದಡೇಸುಗೂರು ವಿರುದ್ಧ ಪಿಎಸ್​ಐ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಶಾಸಕ ಶಿವರಾಜ್ ತಂಗಡಗಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೂ ಪತ್ರ ಬರೆಯುತ್ತೇನೆ. ಇನ್ನೊಂದು ದಾಖಲೆಯೂ ಇದೆ. ಅದನ್ನೂ ಬಿಡುಗಡೆ ಮಾಡುತ್ತೇನೆ. ಈ ಕುರಿತಂತೆ ಈಗಾಗಲೇ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬಳಿಯೂ ಚರ್ಚೆ ನಡೆಸಿದ್ದು, ಸದನದಲ್ಲಿ ಇದರ ಬಗ್ಗೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ ಎಂದರು. ಅಲ್ಲದೇ ನಾನು ಕೊಟ್ಟ ವಿಡಿಯೋ ಸುಳ್ಳಾಗಿದ್ದರೆ ನನಗೆ ಶಿಕ್ಷೆಯಾಗಲಿ. ನಾನು ಅದಕ್ಕೆ ಸಿದ್ಧನಿದ್ದೇನೆ ಎಂದು ತಿಳಿಸಿದರು.

Previous articleದಾಖಲೆ ಇಟ್ಟುಕೊಂಡು ಮೇಲುಕೋಟೆಗೆ ಬನ್ನಿ: ಸಂಸದೆ ಸುಮಲತಾ ಸವಾಲು
Next articleಗೋಕರ್ಣ ಸಮುದ್ರದಲ್ಲಿ ಕೊಚ್ಚಿಹೋದ ಕಲಬುರ್ಗಿ ಯುವಕ