ಉದ್ಯೋಗ ಸೃಷ್ಟಿಸುವ ಬೃಹತ್ ಕನಸು ನಮ್ಮದು

0
13

ಬೆಂಗಳೂರ: ಇಂದು ನಡೆದ ಟೆಕ್ ಸಮಿಟ್‌ನಲ್ಲಿ ವಿವಿಧ ಉದ್ಯಮಿಗಳು ಹಾಗೂ ಕಂಪನಿಗಳ ಸಿಇಒಗಳೊಂದಿಗಿನ ಉಪಹಾರ ಸಭೆಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಉಪಮುಖ್ಯ ಮಂತ್ರಿ ಡಿ. ಕೆ. ಶಿವಕುಮಾರ ಅವರು ಉದ್ಯಮಗಳನ್ನು ಪ್ರೋತ್ಸಾಹಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು ಈ ಮೂಲಕ ಉದ್ಯೋಗ ಸೃಷ್ಟಿಸುವ ಬೃಹತ್ ಕನಸು ನಮ್ಮದು. ರಾಜ್ಯ ರಾಜಧಾನಿ ಬೆಂಗಳೂರು ಐಟಿ ಹಬ್, ಸಿಲಿಕಾನ್ ಸಿಟಿ, ಸಿಲಿಕಾನ್ ವ್ಯಾಲಿ ಎಂಬ ಹೆಸರನ್ನು ಪಡೆದಿದೆ. ಜಗತ್ತಿನ ಟಾಪ್ ಐಟಿ ಕಂಪನಿಗಳೆಲ್ಲ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವುದು ನಮ್ಮ ಹೆಮ್ಮೆ. ಹಲವು ಸಂಪನ್ಮೂಲಗಳನ್ನು ಹೊಂದಿರುವ ಬೆಂಗಳೂರಿನಲ್ಲಿ ಹೂಡಿಕೆ ಮಾಡಲು ಉದ್ಯಮಿಗಳಿಗೆ ಸೂಕ್ತ ಸ್ಥಳ ನಾವೆಲ್ಲರೂ ಸೇರಿ ಬೆಂಗಳೂರು ಮತ್ತು ಕರ್ನಾಟಕದ ಅಭಿವೃದ್ಧಿಗೆ ಕೈ ಜೋಡಿಸೋಣ. ಜಾಗತಿಕ ಮಟ್ಟದಲ್ಲಿ ಬೆಂಗಳೂರನ್ನು ಅಭಿವೃದ್ಧಿ ಮಾಡಿ, ಸದೃಢ ಕರ್ನಾಟಕವನ್ನು ನಿರ್ಮಿಸೋಣ ಎಂದು ತಿಳಿಸಿದ್ದಾರೆ.

Previous articleಕಾರಂಜಾ ಜಲಾಶಯ ಹಿನ್ನಿರಿನಲ್ಲಿ ಚಿರತೆ ಮೃತದೇಹ ಪತ್ತೆ
Next articleಧಾರವಾಡ ಉನ್ನತ‌ ಶಿಕ್ಷಣ ಅಕಾಡೆಮಿಗೆ ಸಚಿವ ಸುಧಾಕರ ಭೇಟಿ