400 ಮೀ. ಓಟ: ಲೇಖನ ಜಿಲ್ಲಾ ಮಟ್ಟಕ್ಕೆ ಆಯ್ಕೆ

0
10

ಶ್ರೀರಂಗಪಟ್ಟಣ: ತಾಲೂಕು ಕ್ರೀಡಾಂಗಣದಲ್ಲಿ‌ ನಡೆದ ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿನ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಪಟ್ಟಣದ ನ್ಯೂ ಆಕ್ಸಫರ್ಡ್ ಶಾಲೆಯ ವಿದ್ಯಾರ್ಥಿನಿ ಲೇಖನ .ಎಸ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್. ಅನಂತರಾಜು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಈ ವೇಳೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಜೆ.ಶ್ರೀನಿವಾಸ್, ಡಾ.ಪ್ರತಿಮಾ ಸೇರಿತೆ ದೈಹಿಕ ಶಿಕ್ಷಕರು ಹಾಗೂ ವಿವಿಧ ಹೋಬಳಿಗಳ ಶಾಲಾ ವಿದ್ಯಾರ್ಥಿಗಳು ಇದ್ದರು.

Previous articleಕಾಂಗ್ರೆಸ್ ಮುಖಂಡನ ಮೇಲೆ ವಂಚನೆ ಪ್ರಕರಣ ದಾಖಲು
Next articleಪಂಚಮಸಾಲಿ ಮೀಸಲಾತಿಗಾಗಿ ಮತ್ತೆ ಹೋರಾಟ