ಹರಿಪ್ರಸಾದ್ ಹೇಳಿಕೆಯಿಂದ ಅವರಿಗೇ ಹಾನಿ

0
7

ಮಂಗಳೂರು: ‘ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಬ್ಬ ಹಿರಿಯ ರಾಜಕಾರಣಿ. ಅವರು ಸಾರ್ವಜನಿಕ ಸಮಾರಂಭದಲ್ಲಿ ಆ ರೀತಿ ಮಾತನಾಡಬಾರದಿತ್ತು. ಅವರ ಹೇಳಿಕೆಯಿಂದ ಬೇರೆ ಯಾರಿಗೂ ಹಾನಿ ಉಂಟಾಗುವುದಿಲ್ಲ. ಇದರಿಂದ ಅವರಿಗೇ ಹಾನಿ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ವೇದಿಕೆಯಲ್ಲಿ ಈ ತೆರನಾದ ಹೇಳಿಕ ಸಮಂಜಸವಲ್ಲ. ಬಿಲ್ಲವ ಈಡಿಗರು ಸೇರಿದಂತೆ ಯಾರನ್ನೂ ಕಡೆಗಣಿಸುವ ಪ್ರಶ್ನೆಯೇ ಕಾಂಗ್ರೆಸ್‌ನಲ್ಲಿ ಇಲ್ಲ ಎಂದರು.
ವಿವಿ ಗಣೇಶೋತ್ಸವ ವಿವಾದ: ಮಂಗಳೂರು ವಿಶ್ವವಿದ್ಯಾನಿಲಯ ಈಗಾಗಲೇ ಬಿ. ಗ್ರೇಡ್‌ಗೆ ಹೋಗಿದೆ. ಅದನ್ನು ಎ ಗ್ರೇಡ್‌ಗೆ ತರಲು ಅಗತ್ಯ ಕ್ರಮಗಳನ್ನ ನಾವು ಮೊದಲು ಮಾಡಬೇಕಾಗಿದೆ. ವಿವಿ ಸ್ವಾಯತ್ತ ಸಂಸ್ಥೆ. ಅವರ ಆಡಳಿತ ಮಂಡಳಿ ಹಂತದಲ್ಲೇ ಅದನ್ನು ಬಗೆಹರಿಸಬೇಕೇ ಹೊರತು ಅದಕ್ಕೆ ಹೊರಗಿನವರ ಹಸ್ತಕ್ಷೇಪ ಸರಿಯಲ್ಲ. ಮಂಗಳೂರು ವಿಶ್ವವಿದ್ಯಾನಿಲಯದ ವಿಸಿ ಹಾಗೂ ರಾಜ್ಯಪಾಲರು ಅದರ ಬಗ್ಗೆ ತೀರ್ಮಾನ
ಮಾಡುತ್ತಾರೆ. ಕಲ್ಲಡ್ಕ ಪ್ರಭಾಕರ ಭಟ್ ಏನು ಮಾತನಾಡುತ್ತಾರೋ ಅದು ನಮಗೆ ಸಂಬಂಧಿಸಿದ್ದಲ್ಲ. ವಿವಿ ಶೈಕ್ಷಣಿಕವಾಗಿ ಬೆಳೆಯಬೇಕು. ಅಭಿವೃದ್ಧಿಯಾಗಬೇಕು. ಅನಗತ್ಯ ವಿಚಾರಗ ಬಗ್ಗೆ ಹೊರಗಿನವರು ಯಾಕೆ ಮಾತನಾಡಬೇಕು ಎಂದು ಪ್ರಶ್ನಿಸಿದರು.
ಕಳೆದ ೪೦ ವರ್ಷಗಳಿಂದ ಅಲ್ಲಿ ಗಣೇಶೋತ್ಸವ ಆಚರಿಸುತ್ತಾರೆಂಬ ಮಾಹಿತಿ ಇದೆ. ಈಗ ಯಾಕೆ ವಿವಾದ ಮಾಡಲಾಗುತ್ತಿದೆ ಎಂದು ಅರ್ಥವಾಗುತ್ತಿಲ್ಲ. ವಿವಿ ಹಣ ಸಾರ್ವಜನಿಕರದ್ದು, ಅದು ಶಿಕ್ಷಣಕ್ಕೆ ಬಳಕೆ ಆಗಬೇಕು. ಕೆಲವರಿಗೆ ವೇತನ, ನಿವೃತ್ತಿ ವೇತನ ನೀಡಿಲ್ಲ. ಅವೆಲ್ಲಾ ಮೊದಲು ಸರಿ ಆಗಲಿ. ಹಬ್ಬ ಆಚರಣೆ ವಿವಿ ವಿವೇಚನೆಗೆ ಬಿಟ್ಟಿದ್ದು. ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ಮುಖ್ಯ ಚುನಾವಣೆ ಹತ್ತಿರ ಬಂದಾಗ ಈ ರೀತಿ ಅಶಾಂತಿ ಸೃಷ್ಟಿಸುವುದನ್ನು ಜನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.

Previous articleಗಣೇಶ ಚತುರ್ಥಿ: ರಜೆ ಗೊಂದಲ
Next articleಭಕ್ತರ ಜಯಘೋಷಗಳ ಮಧ್ಯ ವಿಜಯ ಮಹಾಂತೇಶ ರಥೋತ್ಸವ