ಮಧು ಬಂಗಾರಪ್ಪ ಬೆಂಬಲಿಗರಿಂದ ಜೀವ ಬೆದರಿಕೆ: ಸ್ವಾಮೀಜಿ ಆರೋಪ

0
10

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಬಲಿಗರು ನನಗೆ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ಪೊಲೀಸ್ ‌ಕಮಿಷನರ್ ಭೇಟಿ ಮಾಡುತ್ತಿದ್ದೇನೆ. ಮಧು ಬಂಗಾರಪ್ಪ ವಿರುದ್ಧ ದೂರು ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಬಿ.ಕೆ.ಹರಿಪ್ರಸಾದ್‌ ಅವರು ಹಿಂದುಳಿದ ವರ್ಗದವರು. ಅವರಿಗೆ ಸ್ಥಾನಮಾನ ಕೇಳುವುದರಲ್ಲಿ ಏನು ತಪ್ಪಿದೆ? ಬೇರೆ ಸಮುದಾಯದವರು ಹೋರಾಟ ‌ಮಾಡಿದ್ದರಲ್ವಾ. ಸಮುದಾಯಕ್ಕೆ ಮಧು ಬಂಗಾರಪ್ಪ ಕೊಡುಗೆಯೇನು ಎಂದು ಸ್ವಾಮೀಜಿ ಪ್ರಶ್ನಿಸಿದ್ದಾರೆ.

Previous articleನಾವು ಯಾರನ್ನೂ ನಿಷೇಧಿಸಿಲ್ಲ
Next articleಕಾವೇರಿ ವಿಚಾರದಲ್ಲಿ ಮಾತು ಬದಲಾಯಿಸುತ್ತಿರುವ ಊಸರವಳ್ಳಿ ಸರ್ಕಾರ