100 ದಿನ ಪೂರೈಸಿದ ಶಕ್ತಿ ಯೋಜನೆ

0
16

ಬೆಂಗಳೂರು: ಶಕ್ತಿ ಯೋಜನೆ ಜಾರಿಗೆ ಬಂದು 100 ದಿನಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದು “ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲೆಗೆ ಹೋಗುವ ಪ್ರತಿ ಹೆಣ್ಣುಮಗಳು, ಕುಟುಂಬದ ಹೊಣೆಯನ್ನು ತನ್ನ ಹೆಗಲ ಮೇಲೆ ಹೊತ್ತು ನಿತ್ಯ ದುಡಿಮೆಗೆ ತೆರಳುವ ನಾಡಿನ ಅಕ್ಕ ತಂಗಿಯರು, ವೈದ್ಯಕೀಯ ಚಿಕಿತ್ಸೆಗಾಗಿ ಪ್ರಯಾಣ ಬೆಳೆಸುವ ಬಡತಾಯಂದಿರ ಬದುಕಿನ ಬವಣೆ ನಮ್ಮ ಶಕ್ತಿ ಯೋಜನೆಯ ಹಿಂದಿರುವ ಪ್ರೇರಕ ಶಕ್ತಿ. ಹೆಣ್ಣುಮಕ್ಕಳು ನಾಲ್ಕು ಗೋಡೆಗಳಿಗೆ ಸೀಮಿತವಾಗದೆ ಅವಕಾಶಗಳ ಜಗತ್ತಿನಲ್ಲಿ ತಮ್ಮನ್ನು ತೊಡಗಿಸಿಕೊಂಡು, ತಾವು ಸದೃಢರಾಗುವ ಜೊತೆಗೆ ಬಲಿಷ್ಠ ಸಮಾಜದ ಆಧಾರ ಸ್ತಂಭಗಳಾಗಬೇಕು ಎಂಬ ನಮ್ಮ ಉದ್ದೇಶವನ್ನು ಈಡೇರಿಸುವ ದಿಕ್ಕಿನಲ್ಲಿ ಶಕ್ತಿ ಯೋಜನೆ ಮುಂದಡಿಯಿಡುತ್ತಿದೆ. ಶಕ್ತಿ ಯೋಜನೆ ಜಾರಿಗೊಂಡ ಈ ನೂರು ದಿನಗಳಲ್ಲಿ ಅಸಂಖ್ಯ ತಾಯಂದಿರಲ್ಲಿ ನೆಮ್ಮದಿಯ ನಿಟ್ಟುಸಿರಿಗೆ, ಲಕ್ಷಾಂತರ ವಿದ್ಯಾರ್ಥಿನಿಯರ ಮುಖದಲ್ಲಿ ಮಂದಹಾಸಕ್ಕೆ ಕಾರಣವಾಗಿದೆ ಎಂಬುದು ಯೋಜನೆ ಜಾರಿಗೆ ಕೊಟ್ಟ ನನಗೆ ಅತ್ಯಂತ ಖುಷಿಯ ಸಂಗತಿ ಎಂದಿದ್ದಾರೆ.

Previous articleಜನಪರ ಕಾಳಜಿ ಸರಕಾರಕ್ಕೆ ಇರಲೇ ಇಲ್ಲ
Next articleಕಾವೇರಿ ಕೊಳ್ಳದಲ್ಲಿ ಕಾವೇರಿ ಕಿಚ್ಚು