29ರಂದು ಅಖಂಡ ಕರ್ನಾಟಕ ಬಂದ್‌

0
14

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಸೆಪ್ಟೆಂಬರ್ 26ರಂದು ಮಂಗಳವಾರ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದರೆ ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್‌ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ಸಂಪೂರ್ಣ ತೀರ್ಮಾನಕ್ಕೆ ಬರುತ್ತೇವೆ. ಸೆಪ್ಟೆಂಬರ್ 29ರಂದು ಕನ್ನಡ ಒಕ್ಕೂಟದ ಆಶ್ರಯದಲ್ಲಿ ಎಲ್ಲಾ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ಸಾಹಿತಿಗಳು, ವ್ಯಾಪಾರಿಗಳು ಎಲ್ಲರೂ ಇದಕ್ಕೆ ಬೆಂಬಲ ನೀಡಿ ಸಹಕರಿಸಬೇಕು ಎಂದಿದ್ದಾರೆ.

Previous articleಬಂದ್‌ನಿಂದ ಬ್ರ್ಯಾಂಡ್‌ ಬೆಂಗಳೂರಿಗೆ ಧಕ್ಕೆ
Next articleತಲೆಗೆ ಕಲ್ಲಿನಿಂದ ಜಜ್ಜಿ ಯುವಕನ‌ ಬರ್ಬರ ಹತ್ಯೆ