ಹುಬ್ಬಳ್ಳಿಯಲ್ಲಿ ಯುವಕನ ಕೊಲೆ

0
51
ಕೊಲೆ

ಹುಬ್ಬಳ್ಳಿ: ಮಾರಕಾಸ್ತ್ರಗಳಿಂದ ಯುವಕನ‌ನ್ನು ಹೊಡೆದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಸಿಲ್ವರ್ ಟೌನ್‌ನಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿ ಮೌಲಾಲಿ ಮೃತ ಯುವಕ ಎನ್ನಲಾಗಿದೆ. ಹುಬ್ಬಳ್ಳಿಗೆ ಗಾರೆ ಕೆಲಸ ಮಾಡಲು ಬಂದಿದ್ದನು ಎನ್ನಲಾಗಿದ್ದು, ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿಯೇ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗೋಕುಲ ರೋಡ್ ಪೊಲೀಸರ್ ಭೇಟಿ ಪರಿಶೀಲನೆ ನಡೆಸಿದ್ದಾರೆ.

Previous articleಒಡಕಿನಧ್ವನಿ ಬೇಡ, ಕೇಂದ್ರಕ್ಕೆ ಸ್ಪಷ್ಟ ಸಂದೇಶ ಅಗತ್ಯ
Next articleಆಜ್ ಫಿರ್ ಜೀನೇ ಕಿ ತಮನ್ನಾ ಹೈ…