ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲ

0
9
ಆರ್‌ಎಸ್ಎಸ್

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಪ್ರಕ್ಷುಬ್ಧ ವಾತಾವರಣ ಇರುವ ನಗರ. ಅಲ್ಲಿ ಹಿಂದೆ ಹಲವಾರು ಘಟನೆ ನಡೆದಿದೆ. ಇಂತಹ ಧಾರ್ಮಿಕ ಘಟನೆ ನಡೆದಾಗ ಪೊಲೀಸರು ಸೂಕ್ತ ಮುಂಜಾಗ್ರತ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.
ಶಿವಮೊಗ್ಗದ ಮೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಇಂತ ಘಟನೆ ನಡೆಯುತ್ತದೆ. ಇಂತ ಸ್ಟೇಷನ್‌ಗೆ ವರ್ಗಾವಣೆ ಮಾಡುವಾಗ ಸಮರ್ಥ ಅಧಿಕಾರಿ ಹಾಕಬೇಕು. ಸ್ವಹಿತಾಸಕ್ತಿಗಳಿಗೆ ಬಲಿಯಾಗಿ ಅಧಿಕಾರಿಗಳ ವರ್ಗಾವಣೆ ಮಾಡಿದರೆ, ಅವರು ಕಾನೂನು ಕಾಪಾಡುವ ಬದಲು ಬೇರೆ ಕೆಲಸದಲ್ಲಿಯೇ ಮಗ್ನರಾಗುತ್ತಾರೆ. ಇದರಿಂದ ಸಮಾಜಘಾತುಕ ಶಕ್ತಿಗಳಿಗೆ ಕುಮ್ಮಕ್ಕು ಸಿಗುತ್ತದೆ. ಇದರ ಮೂಲ ಪ್ರತಿ ಡಿಸ್ಟಿಕ್‌ನಲ್ಲಿ ಕ್ಲಬ್, ರಿಯಲ್ ಎಸ್ಟೇಟ್ ಮಾಫಿಯಾ ಶುರುವಾಗಿದೆ. ಇದನ್ನ ಸಮಗ್ರವಾಗಿ ನಿಭಾಯಿಸಬೇಕು. ಶಾಂತಿ ಕಾಪಾಡಬೇಕು. ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಸರ್ಕಾರದಿಂದ ಪೊಲೀಸರಿಗೆ ಒಂದು ಸ್ಪಷ್ಟ ನಿರ್ದೇಶನ ಹೋಗಬೇಕು. ಅಧಿಕಾರಿಳನ್ನು ಯಾವುದೇ ಮುಲಾಜಿಲ್ಲದೆ ಟ್ರಾನ್ಸ್‌ಫರ್ ಮಾಡಿದರೆ. ಇಂತ ಘಟನೆ ನಿಲ್ಲುತ್ತದೆ ಎಂದು ಹೇಳಿದರು.
ಮಾತಲ್ಲಿ ಮಾತ್ರ ಗಾಂಧಿ: ಗಾಂಧಿ ಕಂಡ ಕನಸು ಕರ್ನಾಟಕದಲ್ಲಿ ನನಸು ಅಂತ ಸರ್ಕಾರ ಜಾಹೀರಾತು ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇವರು ಮಾಡುವುದೆಲ್ಲಾ ಗಾಂಧಿ ವಿರೋಧಿ ನೀತಿ. ಸುಳ್ಳು ಹೇಳುವುದರಿಂದ ಗಾಂಧಿ ವಿರೋಧಿ ನೀತಿ ಪ್ರಾರಂಭ ಆಗುತ್ತದೆ. ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವುದು. ಸಿಕ್ಕಲ್ಲೆಲ್ಲಾ ಮಧ್ಯದಂಗಡಿ ಶುರು ಮಾಡಿದ್ದಾರೆ. ಪ್ರತೀ ಗ್ರಾಮ ಪಂಚಾಯತಿಯಲ್ಲಿ ಮಧ್ಯದಂಗಡಿ ತೆರಯುತ್ತಿದ್ದಾರೆ. ಹೇಳಲು ಮಾತ್ರ ಗಾಂಧಿ ಶಾಂತಿ ಮಂತ್ರ ಮಾಡುವುದೆಲ್ಲಾ ಗಾಂಧಿ ವಿರೋಧಿ ಕೆಲಸಗಳು ಎಂದು ಹೇಳಿದರು.

Previous articleಟೆನಿಸ್ ಕ್ರೀಡಾಂಗಣ: ನೂತನ ಮೂಲಭೂತ ಸೌಲಭ್ಯ ಉದ್ಘಾಟನೆ
Next articleಜರ್ಮನ್‌ ಯುವತಿಯ ಮತ್ತೊಂದು ಹಾಡು ಹಂಚಿಕೊಂಡ ಮೋದಿ