Home Advertisement
Home ತಾಜಾ ಸುದ್ದಿ ರಾಜ್ಯದಲ್ಲೂ ಜಾತಿ ಜನಗಣತಿ ವರದಿ ಬಿಡುಗಡೆ ಒಳ್ಳೆಯದು

ರಾಜ್ಯದಲ್ಲೂ ಜಾತಿ ಜನಗಣತಿ ವರದಿ ಬಿಡುಗಡೆ ಒಳ್ಳೆಯದು

0
103
ಸತೀಶ ಜಾರಕಿಹೊಳಿ

ಬೆಳಗಾವಿ: ಬಿಹಾರ ಸರ್ಕಾರ ಜಾತಿ ಗಣತಿ ವರದಿ ಜಾರಿ ಮಾಡಿದ್ದನ್ನು ಸ್ವಾಗತಿಸುತ್ತೇವೆ. ಅದೇ ರೀತಿ ರಾಜ್ಯದಲ್ಲೂ ಜಾತಿ ಗಣತಿ ವರದಿ ಬಿಡುಗಡೆ ಮಾಡಿದರೆ ಒಳ್ಳೆಯದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮದು ಸುಮಾರು ವರ್ಷಗಳ ಹಿಂದೆ ತಯಾರಾಗಿದೆ. ಸರ್ಕಾರ ಮತ್ತು ಸಿಎಂ ನಿರ್ಧಾರ ಮಾಡಬೇಕು. ಜಾತಿ ಗಣತಿ ವರದಿ ಜಾರಿ ಮಾಡುವುದು ಒಳ್ಳೆಯದು. ಯಾವ ಸಮುದಾಯಕ್ಕೆ ಏನೇನು ಕಾರ್ಯಕ್ರಮ ಮಾಡಬೇಕು. ಹೆಚ್ಚಿನ ಅನುದಾನ ಕೊಡಬೇಕು ಅನ್ನೋದು ಗೊತ್ತಾಗುತ್ತದೆ. ಸಾಮಾಜಿಕವಾಗಿ, ಶೈಕ್ಷಣಿಕ ಲೆಕ್ಕಾಚಾರದಲ್ಲಿ ಬಹಳ ಒಳ್ಳೆಯ ಬೆಳವಣಿಗೆ ನಮ್ಮಲ್ಲಿಯೂ ಆಗಬೇಕು ಅನ್ನೋದು ನಮ್ಮ ಆಸೆ ಇದೆ. ಕಳೆದ ಬಾರಿ ಚುನಾವಣೆ ವೇಳೆಗೆ ಮಾಡೋಕೆ ಆಗಲಿಲ್ಲ. ನಮ್ಮ ಸರ್ಕಾರದ ಹಂತದಲ್ಲಿ ಚರ್ಚೆ ಆಗುತ್ತಿದ್ದು, ಆದಷ್ಟು ಬೇಗ ಸರ್ಕಾರ ಗಮನ ಹರಿಸಬೇಕು. ಜನಗಣತಿ ವರದಿಗೆ ೨೦೦ ಕೋಟಿ ರೂ. ಖರ್ಚು ಮಾಡಿರಬೇಕು. ಆದಷ್ಟು ಬೇಗ ವರದಿ ಜಾರಿ ಆಗಬೇಕು ಎಂದು ಒತ್ತಾಯಿಸಿದರು.