ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಹಾಗೂ ಅವರ ಪತ್ನಿ ರಾಬ್ರಿ ದೇವಿ ಮತ್ತು ಅವರ ಪುತ್ರ, ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಯುಪಿಎ ಒಕ್ಕೂಟ ಸರ್ಕಾರದಲ್ಲಿ ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್ ಯಾದವ್ ಅವರು ರೈಲ್ವೆ ಉದ್ಯೋಗಕ್ಕಾಗಿ ಭೂ ಹಗರಣ ಮಾಡಿದ್ದರು ಎಂದು ಪ್ರಕರಣ ದಾಖಲಿಸಲಾಗಿತ್ತು.
























