ಸಿದ್ದರಾಮಯ್ಯ ವಿರುದ್ಧ ಸಿ.ಟಿ ರವಿ ಅವಹೇಳನಕಾರಿ ಹೇಳಿಕೆ…! ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ..!

0
20

ಚಿಕ್ಕಮಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿ .ಟಿ ರವಿ ಅವಹೇಳನಕಾರಿ ಹೇಳಿಕೆ ಹಿನ್ನೆಲೆ ಸಿ.ಟಿ ರವಿ ವಿರುದ್ಧ ನಗರದಲ್ಲಿ ಇಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ.

ಮಾಜಿ ಎಂ ಎಲ್ ಸಿ ಗಾಯತ್ರಿ ಶಾಂತೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ವೃತ್ತದವರೆಗೂ ಮೆರವಣಿಗೆ ನಡೆಸಲಿದೆ. ಪ್ರತಿಭಟನೆ ನಂತರ ಆಜಾದ್ ಪಾರ್ಕ್ ವೃತ್ತದಲ್ಲಿ ಬಹಿರಂಗ ಸಭೆ ನಡೆಸಿ, ಸಿ ಟಿ ರವಿ ಮನೆಗೆ ಮುತ್ತಿಗೆ ಹಾಕುವ ಸಾಧ್ಯತೆಗಳಿವೆ. ಜಿಲ್ಲೆಯ ಹಲವೆಡೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಲಿದ್ದು, ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Previous articleಮೈಸೂರು ದಸರಾ ಉತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುವುದಿಲ್ಲ…
Next articleನಾಳೆ ಬಳ್ಳಾರಿಗೆ ಭೇಟಿ ನೀಡಿ ಎಲ್ಲಾ ಮಾಹಿತಿ ಪಡೆಯುವೆ… : ಸುಧಾಕರ್