ಮಂಡ್ಯ: ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪ್ರಕಟಿಸಿದ ರಾವಣ ಪೋಸ್ಟರ್ ವಿವಾದಕ್ಕೆ ಕಾರಣವಾಗಿದೆ. ಪೋಸ್ಟರ್ ನಲ್ಲಿ ರಾಹುಲ್ ಗಾಂಧಿಯನ್ನು ರಾವಣನನಂತೆ ಬಿಂಬಿಸಲಾಗಿದೆ. ಇದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಕಲ್ಲಹ ಳ್ಳಿಯಲ್ಲಿ ಇರುವ ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ದಿಡೀರನೆ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ರಾವಣನಂತೆ ಬಿಂಬಿಸಿ ಬಿಜೆಪಿ ಬಿಡುಗಡೆ ಗೊಳಿಸಿದ ಪೋಸ್ಟರ್‌ಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿ ಆಕ್ರೋಶ ಹೊರ ಹಾಕಿದರು
ಬಿಜೆಪಿಯ ವರ್ತನೆ ಖಂಡಿಸಿ, ಶನಿವಾರ ನಗರದ ಕಲ್ಲಳ್ಳಿಯ ರವಿ ಸುಮಾ ಸಭಾಂಗಣದಲ್ಲಿ ಜಮಾವಣೆಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರು ದಿಡೀರನೆ ಪ್ರತಿಭಟನೆ ಮಾಡಲು ನಿರ್ಧರಿಸಿ ಹೆದ್ದಾರಿಯಲ್ಲಿ 10 ನಿಮಿಷಗಳ ಕಾಲ ಸಂಚಾರ ತಡೆದು ಸರಿಯಾ ಆಕ್ರೊಶ ವ್ಯಕ್ತಪಡಿಸಿದರು. ಬಿಜೆಪಿ ಪಕ್ಷ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಬಗ್ಗೆ ಧರ್ಮವಿರೋಧಿತನದ ಪೋಸ್ಟರ್‌ಗಳನ್ನು ಬಳಸಿದ್ದಾರೆ ಎಂಬುದು ಕಾಂಗ್ರೆಸ್ ಆರೋಪವಾಗಿದೆ. ಪ್ರತಿಭಟನೆಯಲ್ಲಿ ಶಾಸಕರುಗಳು, ಮಾಜಿ ಶಾಸಕರುಗಳು, ಕೆಪಿಸಿಸಿ ಪದಾಧಿಕಾರಿಗಳು, ಪಕ್ಷದ ಹಿರಿಯ ಮುಖಂಡರುಗಳು, ಮಹಿಳಾ ಸಮಿತಿ ಯುವ ಸಮಿತಿ ಸೇರಿದಂತೆ ಹಲವರು ಹಾಜರಿದ್ದರು.
ಬಿಜೆಪಿ-ಕಾಂಗ್ರೆಸ್ ಮಧ್ಯೆ ರಾವಣ-ದಾನವ ‘ಸಿನಿಮಾ ಪೋಸ್ಟರ್’ ಸಮರ
ಏನಿದು ವಿವಾದ?
ರಾಹುಲ್ ಗಾಂಧಿ ಅವರನ್ನು ರಾವಣನಂತೆ ಬಿಂಬಿಸಿದ ಪೋಸ್ಟರ್ ವಿವಾದ ಸೃಷ್ಟಿಸಿದೆ. ಪೋಸ್ಟರ್ ನಲ್ಲಿ ನವಯುಗದ ರಾವಣ ಎಂದು ಬಿಜೆಪಿ ಬಿಂಬಿಸಿದೆ.. ಈ ವಿವಾದಾತ್ಮಕ ಪೋಸ್ಟರ್‌ನ್ನು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಈ ಟ್ವೀಟ್ ಈಗ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.
ಪೋಸ್ಟರ್ ನಲ್ಲಿ ಏನಿದೆ?
ಪೋಸ್ಟರ್‌ನಲ್ಲಿ ರಾವಣ ಕಾಂಗ್ರೆಸ್ ಪಕ್ಷದ ನಿರ್ಮಾಣ, ಜಾರ್ಜ್ ಸೊರೊಸ್ ನಿರ್ದೇಶನ ಎಂದು ಬರೆದಿದೆ. ಅಲ್ಲದೇ ಚಿತ್ರದಲ್ಲಿ ರಾವಣನಂತೆಯೇ ರಾಹುಲ್ ಗಾಂಧಿಯವರಿಗೆ ಬಹು ತಲೆಗಳನ್ನು ಬಿಡಿಸಲಾಗಿದೆ. ಅಲ್ಲದೇ ರಾವಣನಂತೆ ರಕ್ಷಾಕವಚವನ್ನು ಧರಿಸಿರುವುದನ್ನು ತೋರಿಸಲಾಗಿದೆ. ಇದರ ಜೊತೆ ಹೊಸ ಯುಗದ ರಾವಣ ಬಂದಿದ್ದಾನೆ. ಅವನು ದುಷ್ಟ, ಧರ್ಮ ವಿರೋಧಿಯಾಗಿದ್ದಾನೆ. ಅಷ್ಟೇ ಅಲ್ಲದೆ ರಾಮನ ವಿರೋಧಿಯಾಗಿದ್ದು, ಅವನ ಗುರಿ ಭಾರತವನ್ನು ನಾಶಮಾಡುವುದು ಎಂದು ಬರೆಯಲಾಗಿದೆ.