ಒಂದೇ ಕುಟುಂಬದ ಮೂವರು ಸಜೀವ ದಹನ

0
23

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಬಳಿಯಲ್ಲಿ ಭೀಕರ ಘಟನೆಯೊಂದು ಸಂಭವಿಸಿದೆ. ಮನೆಯಲ್ಲಿ ಬೆಂಕಿ ತಗಲಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬರಿಗೆ ಗಾಯವಾಗಿದೆ.
ತೀರ್ಥಹಳ್ಳಿ ತಾಲ್ಲೂಕಿನ ಹೊಸನಗರ ರಸ್ತೆ ಸಮೀಪ ಇರುವ ಅರಳಸುರಳಿ ಗಣಪತಿ ಕಟ್ಟೆ ರೈಸ್​ ಮಿಲ್​ ಹತ್ತಿರ ಇರುವ ಮನೆಯೊಂದರಲ್ಲಿ ಈ ಘಟನೆ ಸಂಭವಿಸಿದೆ. ಕಲ್ಲೋಣಿ ಎಂದು ಕರೆಯಲ್ಪಡುವ ಮನೆ ರಾಘವೇಂದ್ರ ಕೆಕೋಡ (63) ಎಂಬವರಿಗೆ ಸೇರಿದ್ದಾಗಿದ್ದು ರಾಘವೇಂದ್ರ ಕೆಕೋಡು, ನಾಗರತತ್ನ 55 ಶ್ರೀರಾಂ (34) ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನೂ ಭರತ್ 33 ರವರಿಗೆ ಗಂಭೀರ ಗಾಯವಾಗಿದ್ದು ಅವರನ್ನ ಜೆಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Previous articleಹಿಂದೂ ಮಹಾ ಗಣಪತಿ ಶೋಭಾಯಾತ್ರೆ ಆರಂಭ
Next articleಪಟಾಕಿ ದುರಂತ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆಗ್ರಹ