ಬೆಂಗಳೂರು: ಮದುವೆ, ಗಣೇಶ ಉತ್ಸವ, ರಾಜಕೀಯ ಸಮಾರಂಭ, ಸಮಾವೇಶ, ಕಾರ್ಯಕ್ರಮಗಳಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅತ್ತಿಬೆಲೆ ಪಟಾಕಿ ಮಳಿಗೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಪಟಾಕಿ ಮಾರಾಟಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಇನ್ಮುಂದೆ ಎಲ್ಲ ಮೆರವಣಿಗೆಗಳಲ್ಲಿ ಪಟಾಕಿಗೆ ನಿಷೇಧ ವಿಧಿಸಲಾಗಿದೆ. ಆದರೆ ದೀಪಾವಳಿಗೆ ಪಟಾಕಿ ನಿಷೇಧ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗುವುದು. ಸುಪ್ರೀಂಕೋರ್ಟ್ ಆದೇಶದ ಪ್ರಕಾರ, ಹಸಿರು ಪಟಾಕಿ ನಿಯಾಮವಳಿಗಳಿಗೆ ವಿರುದ್ಧವಾಗಿ ಅಂಗಡಿಗಳು ಇದ್ದರೆ ಕ್ರಮ ಕೈಗೊಳ್ಳಬೇಕು. ಇನ್ನುಮುಂದೆ ಅನಧಿಕೃತ ಮಳಿಗೆಗಳು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇವೆ. ಪಟಾಕಿ ಅಂಗಡಿಗಳಿಗೆ ಲೆಸೆನ್ಸ್‌ಗಳಿಗೆ ಸುಪ್ರೀಂಕೋರ್ಟ್ ಆದೇಶದ ಪ್ರಕಾರವೇ ಲೆಸೆನ್ಸ್ ಕಡ್ಡಾಯ ನೀಡುವಂತೆ ಸೂಚಿಸಲಾಗಿದೆ ಎಂದರು.