ಪ್ರಿಯಾಂಕ್ ಖರ್ಗೆಗೆ ಅಭಿವೃದ್ಧಿ ಬೇಕಾಗಿಲ್ಲ: ಸಿಎಂ

0
23
ಬಸವರಾಜ ಬೊಮ್ಮಾಯಿ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 5,000 ಕೋಟಿ ರೂ. ಅನುದಾನ ಘೋಷಣೆ ಮಾಡಿರುವುದನ್ನು ಸ್ವಾಗತಿಸುವುದು ಬಿಟ್ಟು ವಿರೋಧಿಸುತ್ತಿರುವ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5,000 ಕೋಟಿ ರೂ. ಅನುದಾನವನ್ನು ಮುಂದಿನ ಆಯವ್ಯಯದಲ್ಲಿ ಒದಗಿಸುವುದಾಗಿ ಅತ್ಯಂತ ಬದ್ಧತೆಯಿಂದಲೇ ಘೋಷಿಸಿದ್ದೇನೆ. ಹಿಂದುಳಿದ ಪ್ರದೇಶದ ಅಭಿವೃದ್ಧಿಗೆ ಮುಂದಾದಾಗ ಎಲ್ಲರೂ ಅದಕ್ಕೆ ತಕ್ಕಂತೆ ಕೆಲಸ ಮಾಡಬೇಕು. ಇದರಲ್ಲಿ ರಾಜಕಾರಣದ ಮಾತಾಡುವುದು ಸರಿಯಲ್ಲ ಎಂದರು.

Previous articleಮೂಗಿಗೆ ತುಪ್ಪ ಸವರಿ ಹೋಗಿದ್ದಾರೆ‌ ಸಿಎಂ: ಪ್ರಿಯಾಂಕ್
Next articleಮಕ್ಕಳ ಕಳ್ಳನೆಂದು ಭಾವಿಸಿ ವ್ಯಕ್ತಿಗೆ ತಳಿತ