ಅಕ್ರಮ ಮದ್ಯಕ್ಕೆ ಟ್ರಾನ್ಸ್‌ಫಾರ್ಮರ್‌ ಮಾದರಿ

0
15

ಬೆಳಗಾವಿ: ಅಕ್ರಮವಾಗಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಸಾಗಿಸುತ್ತಿದ್ದ ೧೦ ಲಕ್ಷ ಮೌಲ್ಯದ ಮದ್ಯವನ್ನು ಅಬಕಾರಿ ಅಧಿಕಾರಿಗಳು ಮಂಗಳವಾರ ವಶಪಡಿಸಿಕೊಂಡಿದ್ದಾರೆ.
ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಟೋಲ್ ಗೆಟ್ ಬಳಿ ಅಬಕಾರಿ ಅಧಿಕಾರಿಗಳು ತಪಾಸಣೆ ನಡೆಸಿ ವಶ ಪಡಿಸಿಕೊಂಡಿದ್ದಾರೆ. ಗೋವಾದಿಂದ ತೆಲಂಗಾಣಕ್ಕೆ ಸಾಗಿಸುತ್ತಿದ್ದ ಈ ಅಕ್ರಮ ಮದ್ಯಕ್ಕೆ ಟ್ರಾನ್ಸ್‌ಫಾರ್ಮರ್ ಮಾದರಿಯಲ್ಲಿ ಸಿದ್ಧಪಡಿಸಿದ ಬಾಕ್ಸ್‌ಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹10 ಲಕ್ಷ ಮೌಲ್ಯದ ಗೋವಾ ಮದ್ಯವನ್ನು ಅಬಕಾರಿ ಅಧಿಕಾರಿಗಳು ಮಂಗಳವಾರ ವಶಪಡಿಸಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಫ್ಲೈವುಡ್ ಜೋಡಿಸಿ ಅದರ ಮಧ್ಯದಲ್ಲಿ ಮದ್ಯದ ಬಾಟಲಿಗಳನ್ನು ಇಟ್ಟು ಸಾಗಿಸುತ್ತಿದ್ದನ್ನು ವಶಕ್ಕೆ ಪಡೆದಿದ್ದರು.

Previous articleದೇವರ ಹೆಸರಿನಲ್ಲಿ ಮೋಸ ಸಲ್ಲದು
Next articleರಾಜಕಾರಣದಿಂದ ಅನರ್ಹ ಮಾಡುವ ಕೆಲಸ ಮಾಡಲಿ