ರಾಜ್ಯಾಧ್ಯಕ್ಷರಾಗಿ ಹೆಚ್​ ಡಿ ಕುಮಾರಸ್ವಾಮಿ

0
26

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ತಾತ್ಕಾಲಿಕವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ ಎಂದು ಮಾಜಿ ಪ್ರಧಾನಿ ಹೆಚ್​​​ಡಿ ದೇವೇಗೌಡ ಹೇಳಿದ್ದಾರೆ.
ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪಕ್ಷದ ಜವಾಬ್ದಾರಿ ಸ್ಥಾನವನ್ನು ನಾವು ಮಾರ್ಪಾಡು ಮಾಡಬೇಕಿದೆ ಎಂದರು.
ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಲಾಗಿದೆ. ಹಿಂದಿನ ಅಧ್ಯಕ್ಷರ(ಇಬ್ರಾಹಿಂ) ಹೇಳಿಕೆಗಳನ್ನು ನಾನು ಪ್ರಸ್ತಾಪ ಮಾಡಲು ಹೋಗಲ್ಲ. ನಾವು ಬಿಜೆಪಿ ಜೊತೆ ಹೋಗುವ ಸನ್ನಿವೇಶ ಸೃಷ್ಟಿಸಿದ್ದು ಯಾರು ? ನಾವು ಭಾರತೀಯ ಜನತಾ ಪಕ್ಷದ ಸರ್ಕಾರದಲ್ಲಿ ಭಾಗಿಯಾಗಿಲ್ಲ. ಲೋಕಸಭಾ ಚುನಾವಣೆ ಪೂರ್ವದಲ್ಲಿ ಮೈತ್ರಿ ಮಾಡಿಕೊಂಡಿದ್ದೇವೆ ಅಷ್ಟೇ. ಇದರಿಂದ ಜೆಡಿಎಸ್​ ಸಿದ್ಧಾಂತ ಅಥವಾ ನಾಯಕರಿಗೆ ಯಾವುದೇ ಸಮಸ್ಯೆಯಿಲ್ಲ. ಮುಸ್ಲಿಂ ನಾಯಕರನ್ನು ನಮ್ಮ ಪಕ್ಷದಲ್ಲಿ ಕಡೆಗಣನೆ ಮಾಡಿಲ್ಲ. ಪಕ್ಷ ಉಳಿಸಿಕೊಳ್ಳಬೇಕಾಗಿರುವುದರಿಂದ ಮೈತ್ರಿಮಾಡಿಕೊಂಡಿದ್ದೇವೆ ಎಂದರು.

Previous articleಪೂಜೆಗೆ ಹೋಗಿದ್ದ ಮಹಿಳೆಯ ಮಂಗಳಸೂತ್ರ ದೋಚಿ ಪರಾರಿ
Next articleರೈತರ ಒತ್ತುವರಿ ತೆರವು ಮಾಡಬೇಡಿ