ಸಚಿವ ಸ್ಥಾನ ಕೊಡೋದು ಬಿಡೋದು ಅವರಿಗೆ ಸೇರಿದ್ದು

0
20

ಚಾಮರಾಜನಗರ: ಜೂನ್ ಒಳಗೆ ನನಗೆ ಮಂತ್ರಿ ಸ್ಥಾನ ಕೊಡ್ತೀನಿ ಎಂದು ಸಿಎಂ ಹೇಳಿದ್ದಾರೆ. ಸಚಿವ ಸ್ಥಾನ ಕೊಡೋದು ಬಿಡೋದು ಅವರಿಗೆ ಸೇರಿದ್ದು. ಬಲವಂತ ಮಾಡಲು ನಾನ್ಯಾರು ಎಂದು ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಉಪಸಭಾಪತಿ ಸ್ಥಾನ ಕೊಟ್ಟಿದ್ದರು. ಆದರೆ ನಾನೇ ಒಪ್ಪಲಿಲ್ಲ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿಗೆ, ಉಪಮುಖ್ಯಮಂತ್ರಿಗೆ ಹಾಗೂ ಹೈಕಮಾಂಡ್‌ಗೆ ಗೊತ್ತಿದೆ. ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಪಕ್ಷದಲ್ಲಿ ಎಲ್ಲರೂ ಒಗ್ಗಾಟ್ಟಾಗಿ ಇದ್ದೇವೆ. ಯಾರೊಂದಿಗೂ ಭಿನ್ನಾಭಿಪ್ರಾಯವಿಲ್ಲ ಎಂದರು.

Previous articleಮೈತ್ರಿ ವಿಚಾರ ಮರುಪರಿಶೀಲನೆ ಮಾಡಿ ಎಂದು ಮತ್ತೊಮ್ಮೆ ಕೈಮುಗಿದು ಬೇಡುತ್ತೇನೆ
Next articleಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ