ಭೀಕರ ರಸ್ತೆ ಅಪಘಾತ: ಐವರು ಸ್ಥಳದಲ್ಲೆ ಸಾವು

0
12

ಕಲಬುರಗಿ: ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಐವರು ಮೃತಪಟ್ಟಿರುವ ದಾರುಣ ಘಟನೆ ಅಫಜಲಪುರ ತಾಲೂಕಿನ ಹಳ್ಳೊಳ್ಳಿ ಕ್ರಾಸ್ ಬಳಿ ಗುರುವಾರ ನಡೆದಿದೆ.
ಮೃತರೆಲ್ಲರೂ ನೇಪಾಳ ಮೂಲದ ಒಂದೇ ಕುಟುಂಬದವರಾಗಿದ್ದು, ಒಂದೇ ಬೈಕ್‌ನಲ್ಲಿ ಇಬ್ಬರು ಮಕ್ಕಳು ಸೇರಿ ಐವರು ದುಧನಿಯಿಂದ ಅಫಜಲಪುರಕ್ಕೆ ಬರುತ್ತಿದ್ದರು. ದುಧನಿಯಿಂದ ಅಫಜಲಪುರ ಕಡೆಗೆ ಬರುತ್ತಿದ್ದ ಬೈಕ್‌ಗೆ ಲಾರಿ ಎದುರಿನಿಂದ ಡಿಕ್ಕಿ ಹೊಡೆದ ರಭಸಕ್ಕೆ ದೇಹ ಛಿದ್ರ ಛಿದ್ರಗಳಾಗಿ ರಸ್ತೆ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಮೃತರು ಅಫಜಲಪುರದಲ್ಲಿ ಫಾಸ್ಟ್ಪುಡ್ ಹೋಟೆಲ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಕಳೆದ ಕೆಲ ವರ್ಷಗಳಿಂದ ಅಫಜಲಪುರದಲ್ಲೇ ಆ ಕುಟುಂಬ ವಾಸವಾಗಿತ್ತು ಎಂದು ಹೇಳಲಾಗಿದೆ. ಸ್ಥಳಕ್ಕೆ ಅಫಜಲಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Previous articleಕಾಲೇಜಿನ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
Next articleಎಂಇಎಸ್ ವಿರುದ್ಧ ಕೇಸ್