ಬರ ಪರಿಶೀಲನೆ ಮೊಟಕು: ರೈತರ ಅಹವಾಲು ಸ್ವೀಕರಿಸಿದ ಲಾಡ್

0
10

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕೈಗೊಂಡಿದ್ದ ಬರ ಪರಿಶೀಲನೆ ಅಧ್ಯಯನವು ಮಳೆಯಿಂದ ರದ್ದಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿಯೇ ರೈತರಿಂದ ಅಹವಾಲು ಸ್ವೀಕರಿಸಿದರು.
ಕುಸುಗಲ್ ಗ್ರಾಮ ಪಂಚಾಯತಿಯಲ್ಲಿ ಗ್ರಾಮಸ್ಥರು ಹಾಗೂ ರೈತರ ಅಹವಾಲು ಸ್ವೀಕರಿಸಿದರು. ಅಲ್ಲದೇ ರೈತರು ತಮ್ಮ ಕಷ್ಟವನ್ನು ಸಚಿವರ ಮುಂದೆ ಹೇಳಿಕೊಂಡಿದ್ದು, ಕೂಡಲೇ ಬಗೆಹರಿಸುವ ಭರವಸೆ ನೀಡಿದರು.
ಇನ್ನೂ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕು ಹಾಗೂ ಕುಂದಗೋಳ ತಾಲೂಕಿನ ಬರ ಪರಿಶೀಲನೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ಮಳೆಯ ಆಗಮನದಿಂದ ಕಾರ್ಯಕ್ರಮ ಮೊಟಕುಗೊಂಡಿದೆ. ಈ ನಿಟ್ಟಿನಲ್ಲಿ ಮಳೆಯಾಗಿದ್ದರಿಂದ ರೈತರು ಹರ್ಷ ವ್ಯಕ್ತಪಡಿಸಿದರು.

Previous articleಬರ ಪರಿಶೀಲನೆಗೆ ‘ವರುಣನ ಅಡ್ಡಿ’
Next articleಆರು ಚಿನ್ನದ ಪದಕ ಮುಡಿಗೇರಿಸಿದ ರಜನಿ ಲಕ್ಕ